More

    ಜೂ. 4ರಂದು ಜಿಲ್ಲಾಮಟ್ಟದ ಜೈನ ಪ್ರತಿಭಾ ಪುರಸ್ಕಾರ

    ಜಮಖಂಡಿ: ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ತಾಲೂಕಿನ ಜೈನ ಸಮಾಜದ ಆಶ್ರಯದಲ್ಲಿ ನಗರದ ಪಾರ್ಶ್ವನಾಥ ದಿಗಂಬರ ಜೈನ ಮಂದಿರದಲ್ಲಿ ಜೂ.4 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಮಟ್ಟದ ಜೈನ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಟಿ.ಎಸ್.ಉಗಾರ ಹೇಳಿದರು.

    ನಗರದ ಕಾನಿಪ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಬಾಗಲಕೋಟೆ ಜಿಲ್ಲೆ ರಹವಾಸಿಯಾಗಿರುವ ಜೈನ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

    ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಜೈನ ಸಮಾಜದಿಂದ 7ನೇ ಪ್ರತಿಭಾ ಪುರಸ್ಕಾರ ಸಮಾರಂಭ ಇದಾಗಿದೆ. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದರು.

    ಸಂಘದಲ್ಲಿನ 25 ಲಕ್ಷ ರೂ. ದತ್ತಿ ನಿಧಿಯಿಂದ ಬಂದ ಬಡ್ಡಿ ಹಣದಲ್ಲಿ ಪ್ರತಿ ವಿದ್ಯಾರ್ಥಿಗೆ 1 ಸಾವಿರ ರೂ. ನಗದು, ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಎಂದರು.

    ಜಿಲ್ಲೆಯ ರಹವಾಸಿಯಾಗಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳು ಜೂ. 1ರ ಒಳಗಾಗಿ ಅಂಕಪಟ್ಟಿ ನಕಲು ಪ್ರತಿ, ಆಧಾರ್ ಕಾರ್ಡ್, ಭಾವಚಿತ್ರ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9448339768, 9739221006 ಸಂಖ್ಯೆಗೆ ಸಂಪರ್ಕಿಸಬೇಕು ಎಂದು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಬಸವರಾಜ ಆಲಗೂರ, ಧರಿಗೊಂಡ ದೇಸಾಯಿ, ನೇಮಿನಾಥ ರೇಗೌಡರ, ಅಣ್ಣಾಸಾಬ ಪಡನಾಡ, ಮಹಾಬಲ ಜುಂಝರವಾಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts