More

    ಜೆಎನ್‌ಎಂಸಿಗೆ ಕೇಂದ್ರ ಸಚಿವ ಭಗವಂತ ಖೂಬಾ ಭೇಟಿ

    ಬೆಳಗಾವಿ: ನಗರದ ಕೆಎಲ್‌ಇ ಸಂಸ್ಥೆಯ ಜವಾಹರಲಾಲ್ ನೆಹರು ಮೆಡಿಕಲ್ ಕಾಲೇಜಿನ ಫೆಥಾಲಜಿ ಹಾಗೂ ವಸ್ತು ಸಂಗ್ರಹಾಲಯಕ್ಕೆ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಸೋಮವಾರ ಭೇಟಿ ನೀಡಿ, ವ್ಯವಸ್ಥೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

    ವೈದ್ಯಕೀಯ ತರಬೇತಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಯಮಾವಳಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ವಿಶ್ವದರ್ಜೆಯ ತರಬೇತಿ ನೀಡಲಾಗುತ್ತಿದೆ. ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಸೌಭಾಗ್ಯವಂತರು ಎಂದು ಖೂಬಾ ಹೇಳಿದರು.

    ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರೆ ಕೋರೆ ಅವರು ಹಾಗೂ ಕಾಹೆರ್ ಕುಲಪತಿ, ಕುಲಸಚಿವರು, ಪ್ರಾಧ್ಯಾಪಕರು, ಸಂಸ್ಥೆಯ ಕಾರ್ಯದರ್ಶಿ ಎಲ್ಲರೂ ಒಂದುಗೂಡಿ ಗುಣಾತ್ಮಕ ಶಿಕ್ಷಣಕ್ಕೆ ಆಧ್ಯತೆ ನೀಡಿದ್ದಾರೆ. 100 ವರ್ಷಕ್ಕೂ ಅಧಿಕ ಕಾಲ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ವೈದ್ಯಕೀಯ ಆಸ್ಪತ್ರೆಯ ಮೂಲಕ ಆರೋಗ್ಯ ಸೇವೆ ನೀಡುತ್ತಿರುವುದು ಶ್ಲಾಘನೀಯ.

    ಎಲ್‌ಕೆಜಿಯಿಂದ ಸ್ನಾತಕೋತ್ತರ ಶಿಕ್ಷಣದ ವರೆಗೆ ಎಲ್ಲ ಕೋರ್ಸ್‌ಗಳನ್ನು ಒಂದೇ ಕೆಂದ್ರದಲ್ಲಿ ದೊರೆಯುವಂತೆ ಮಾಡಿರುವ ಡಾ.ಪ್ರಭಾಕರ ಕೋರೆ ಅವರ ದೂರದೃಷ್ಟಿ, ನಿರಂತರ ಪ್ರಯತ್ನ ಮೆಚ್ಚುವಂಥದ್ದು. ಉತ್ತರ ಕರ್ನಾಟಕ ಜನತೆಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಗೆ ಕೆಎಲ್‌ಇ ಸಂಸ್ಥೆ ಸಹಕಾರಿಯಾಗಿದೆ ಎಂದರು. ಕಾಹೆರ್ ಕುಲಪತಿ ಡಾ.ವಿವೇಕ ಸಾವೋಜಿ, ಕುಲಸಚಿವ ವಿ.ಎ. ಕೋಠಿವಾಲೆ, ಕೆಎಲ್‌ಇ ಕಾರ್ಯದರ್ಶಿ ಬಿ.ಜಿ. ದೇಸಾಯಿ, ವಿವಿ ಪ್ರಾಧ್ಯಾಪಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts