More

    ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಹನ್ನೊಂದನೇ ವಾರ್ಷಿಕ ಘಟಿಕೋತ್ಸವ

    ಮೈಸೂರು: ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಹನ್ನೊಂದನೇ ವಾರ್ಷಿಕ ಘಟಿಕೋತ್ಸವ ಬುಧವಾರ ಚಾಮುಂಡಿಬೆಟ್ಟದ ತಪ್ಪಲಿನ ಶ್ರೀ ಸುತ್ತೂರು ಶಾಖಾ ಮಠದ ಆವರಣದಲ್ಲಿ ನೆರವೇರಿತು.
    ಘಟಿಕೋತ್ಸವದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಔಷಧ ವಿಜ್ಞಾನ, ಆಡಳಿತ ನಿರ್ವಹಣೆ, ಜೀವ ವಿಜ್ಞ್ಞಾನ ಮತ್ತು ಜೈವಿಕ ವೈದ್ಯಕೀಯ ವಿಜ್ಞಾನದ ನಿಕಾಯದಿಂದ ಒಟ್ಟು 1436 ವಿದ್ಯಾರ್ಥಿಗಳಿಗೆ ಸ್ನಾತಕಪೂರ್ವ, ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪಡವಿ ಪ್ರದಾನ ಮಾಡಲಾಯಿತು.
    46 ಅಭ್ಯರ್ಥಿಗಳಿಗೆ ಪಿಎಚ್‌ಡಿ ಪದವಿ ಹಾಗೂ 5 ಅಭ್ಯರ್ಥಿಗಳಿಗೆ ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಪದವಿ (ಡಿಎಂ ಮತ್ತು ಎಂಸಿಎಚ್) ಯನ್ನು ಪ್ರದಾನ ಮಾಡಲಾಯಿತು. ಪ್ರೀತಿ ಪ್ರಕಾಶ್ ಪ್ರಭು ಐದು, ಸಾಲ್ವಾೃ ಎಸ್.ರಾಜ್ ಹಾಗೂ ಮಲೈಕಾ ಸೊಲಮಾನ್ ತಲಾ ಮೂರು ಚಿನ್ನದ ಪದಕ ಪಡೆದರು. ಡಾ.ಸಿದ್ದಾರ್ಥ ಸುಬ್ರಹ್ಮಣ್ಯಂ ಜೋಶಿ, ಡಾ.ಕೃಷ್ಣಕುಮಾರ್, ಡಾ.ಅಶ್ವತಿ, ಡಾ.ವಿನುತಾ, ಡಾ.ಸ್ಫೂರ್ತಿರಾಜ್, ಡಾ.ಡಿ.ಎಚ್.ಪ್ರವೀನ್, ಡಾ.ಅನು ಜಾರ್ಜ್, ಡಾ.ಅಭಿಮನ್ಯು, ಡಾ.ಸಿ.ಮಯೂರ್, ಡಾ.ಪೂಜಾ ಸೇರಿದಂತೆ 52 ವಿದ್ಯಾರ್ಥಿಗಳಿಗೆ ಒಟ್ಟು 72 ಪದಕಗಳನ್ನು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
    ಆರೋಗ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪದಕ ಪ್ರದಾನ ಮಾಡಿಡುವ ಜತೆಗೆ ಘಟಿಕೋತ್ಸವ ಭಾಷಣ ಮಾಡಿದರು. ಆರೋಗ್ಯ ಕ್ಷೇತ್ರ, ಸಂಶೋಧನೆಯಲ್ಲಿ ಜೆಎಸ್‌ಎಸ್ ವಿಶ್ವವಿದ್ಯಾಲಯ ಕರ್ನಾಟಕಕ್ಕೆ ಜಾಗತಿಕ ಮಟ್ಟದಲ್ಲಿ ಹೆಸರು ತಂದುಕೊಟ್ಟಿದೆ. ಜೆಎಸ್‌ಎಸ್ ಸಂಸ್ಥೆಯು ನಳಂದ, ತಕ್ಷಶಿಲಾ ಮಾದರಿಯಲ್ಲಿ ಬೆಳೆಯಲಿದೆ. ಕೋವಿಡ್‌ ವಿರುದ್ಧ ಇನ್ನೂ ಹೋರಾಟ ನಡೆಯುತ್ತಿದ್ದು, 1,800 ಹಾಸಿಗೆಯ ಆಸ್ಪತ್ರೆ, ನುರಿತ ಸಿಬ್ಬಂದಿಯನ್ನು ನೀಡುವ ಮೂಲಕ ಜೆಎಸ್‌ಎಸ್ ಈ ಹೋರಾಟದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಿದೆ ಎಂದು ಸಚಿವರು ಶ್ಲಾಘಿಸಿದರು.
    ಶೇ.70 ರಷ್ಟು ವೈದ್ಯರು ನಗರಗಳಲ್ಲಿ ನೆಲೆಸಲು ಬಯಸುತ್ತಾರೆ. ಆದರೆ ಶೇ.70 ರಷ್ಟು ಜನರು ಹಳ್ಳಿಗಳಲ್ಲಿ ಜೀವಿಸುತ್ತಿದ್ದು, ಇವರಿಗಾಗಿ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಬೇಕು. ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ವ್ಯಾಸಂಗ ಪೂರ್ಣಗೊಳಿಸಿದ ನಂತರ ಹಳ್ಳಿಗಳಲ್ಲಿ ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ವರ್ಷ 2,500 ವೈದ್ಯರು ವ್ಯಾಸಂಗ ಮುಗಿಸಲಿದ್ದಾರೆ. ಮಾನವೀಯತೆ ಹಾಗೂ ಜವಾಬ್ದಾರಿಯಿಂದ ಈ ಅಂಶ ಮನಗಂಡು, ಹಳ್ಳಿಗಳಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕೋರಿದರು.
    ಕೆಲ ವೈದ್ಯರು ಈ ನಿಯಮ ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅಂತಹವರು ಪ್ರಕರಣ ಹಿಂಪಡೆದು ಹಳ್ಳಿಗಳಲ್ಲಿ ಸೇವೆ ಸಲ್ಲಿಸಬೇಕು. ಹೊರ ದೇಶಗಳ ಸಂಸ್ಥೆಗಳಲ್ಲೂ ವ್ಯಾಸಂಗ ಮಾಡಬಹುದು. ಆದರೆ ಮರಳಿ ಬಂದು ನಮ್ಮ ದೇಶದಲ್ಲೇ ಸೇವೆ ಸಲ್ಲಿಸಬೇಕು ಎಂದರು.
    ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಪದವೀಧರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
    ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಕುಲಪತಿ ಡಾ.ಸುರೀಂದರ್ ಸಿಂಗ್, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ, ಸಮಕುಲಾಧಿಪತಿ ಡಾ.ಬಿ.ಸುರೇಶ್, ಕುಲಸಚಿವ ಡಾ.ಬಿ.ಮಂಜುನಾಥ್, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಆರ್.ಸುಧೀಂದ್ರ ಭಟ್, ಡಾ.ಮಮತಾ. ಡಾ.ಪ್ರಮೋದ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts