More

    ಜೆಡಿಎಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿ

    ಮದ್ದೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯನ್ನು ಕಾಣುತ್ತದೆ ಎಂದು ಶಾಸಕ ಸುರೇಶ್‌ಗೌಡ ಭರವಸೆ ನೀಡಿದರು.
    ತಾಲೂಕಿನ ಘಟ್ಟಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆದರೆ ಸರ್ವ ಜನಾಂಗಕ್ಕೂ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತಂದು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
    ಜೆಡಿಎಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದು ಅಧಿಕಾರಕ್ಕೆ ಬಂದರೆ ನಾನೂ ಸಚಿವನಾಗುವ ಸಾಧ್ಯತೆಗಳು ಇರುವುದರಿಂದ ತಾಲೂಕಿನ ಮತದಾರರು ನನ್ನನ್ನು ಗೆಲ್ಲಿಸಿದರೆ ತಾಲೂಕು ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡಲು ಸಹಕಾರಿಯಾಗುತ್ತದೆ ಎಂದರು.
    ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿ ಅವರು ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆಗಳನ್ನ ಜಾರಿಗೆ ತಂದು ರೈತರು, ಕಾರ್ಮಿಕರು, ಮಹಿಳೆಯರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಸೇರಿದಂತೆ ಪ್ರತಿಯೊಂದು ವರ್ಗಕ್ಕೂ ಅನುಕೂಲ ಕಲ್ಪಿಸಲಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಜೆಡಿಎಸ್ ಪಕ್ಷದಿಂದ ಮಾತ್ರ ಎಂದು ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ದುರಾಡಳಿತದಿಂದ ರೋಸಿ ಹೋಗಿರುವ ರಾಜ್ಯದ ಜನತೆ ಜೆಡಿಎಸ್‌ಗೆ ಅಧಿಕಾರ ನೀಡುವುದು ಖಚಿತವಾಗಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಗ್ರಾ.ಪಂ. ಮಾಜಿ ಅಧ್ಯಕ್ಷ ಘಟ್ಟಹಳ್ಳಿ ಕರಿಗೌಡ, ಮುಖಂಡರಾದ ಶಿವಲಿಂಗಯ್ಯ, ರುದ್ರೇಶ್, ಎಂ.ನಾಗೇಶ್, ಕೃಷ್ಣ, ರಾಮಕೃಷ್ಣ, ಚಂದು, ಶಿವರಾಮು, ರಾಜಮ್ಮ, ಪುಟ್ಟಲಿಂಗಮ್ಮ, ಶಾಂತಮ್ಮ, ಪುಟ್ಟಮ್ಮ, ಕೌಡ್ಲೆ ರಾಮಣ್ಣ, ಆಬಲವಾಡಿ ಸುರೇಶ್, ಬಿಬಿಎಂಪಿ ಪುಟ್ಟರಾಜು, ಗಿರೀಶ್ ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts