More

    ಜೆಡಿಎಸ್ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ

    ಹಾಸನ: ಜಿಲ್ಲೆಯ ಜೀವ ನದಿ ಹೇಮಾವತಿ ಜಲಾಶಯದಿಂದ ತುಮಕೂರಿಗೆ ನೀರು ಹರಿಸುವ ರೀತಿಯಲ್ಲಿ ಹಾಸನ ಜಿಲ್ಲೆಗೂ ತಕ್ಷಣದಿಂದ ನೀರು ಬಿಡಬೇಕು ಎಂದು ಒತ್ತಾಯಿಸಿ ಗುರುವಾರ ಜೆಡಿಎಸ್ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
    ಈ ವರ್ಷ ಮಳೆಯ ಅಭಾವದಿಂದ ಜಿಲ್ಲೆಯಲ್ಲೂ ಬರ ಪರಿಸ್ಥಿತಿ ತಲೆ ದೋರಿದ್ದು, ಈಗಾಗಲೇ ರಾಜ್ಯ ಸರ್ಕಾರ ಜಿಲ್ಲೆಯ 8 ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಣೆ ಮಾಡಿದೆ. ಹೇಮಾವತಿ ಜಲಾಶಯದಲ್ಲಿ ಪ್ರಸ್ತುತ ನೀರು ಸಂಗ್ರಹ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ತುಂಬಾ ಕಡಿಮೆ ಇದೆ. ಕಳೆದ ವರ್ಷ ಇದೇ ದಿನ 20.635 ಟಿಎಂಸಿ ನೀರಿತ್ತು. ಈ ವರ್ಷ 12.652 ಟಿಎಂಸಿ ನೀರಿದೆ. ಇದರಲ್ಲಿ ಬಳಕೆ ಮಾಡಬಹುದಾದ ನೀರು ಕೇವಲ 8.280 ಟಿಎಂಸಿ ಮಾತ್ರ. ನೀರಿನ ಪ್ರಮಾಣ ಕಡಿಮೆ ಇದ್ದರೂ ಕೂಡ ಕಳೆದ ಹತ್ತು ದಿನಗಳಿಂದಲೂ ಎಡದಂಡೆ ಮೂಲಕ ಹೇಮಾವತಿ ಜಲಾಶಯದಿಂದ ಏಕಾಏಕಿ ನೀರು ಹರಿಸಲಾಗುತ್ತಿದೆ ದೂರಿದರು.
    ಪ್ರಸ್ತುತ ಜಿಲ್ಲೆಯಲ್ಲಿ ತೀವ್ರ ಬರಗಾಲ ಪರಿಸ್ಥಿತಿ ಇದೆ. ಅಂತರ್ಜಲ ಕೊರತೆಯಿಂದಾಗಿ ಅನೇಕ ಕಡೆಗಳಲ್ಲಿ ಕುಡಿಯವ ನೀರಿನ ಸಮಸ್ಯೆ ತಲೆದೋರಿದೆ. ಮಳೆ ಯಾವಾಗ ಬರುತ್ತೆಯೋ ಎಂಬುದು ತಿಳಿಸಿಲ್ಲ. ಸದ್ಯ ಹೇಮಾವತಿ ಜಲಾಶಯದಿಂದ ನೀರು ಹರಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಹಾಸನ ನಗರ ಸೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ಇದೆ. ಹಾಗಾಗಿ ಹಾಲಿ ಹರಿಯುತ್ತಿರುವ ನೀರನ್ನು ನಮ್ಮ ಜಿಲ್ಲೆ ವ್ಯಾಪ್ತಿಯಲ್ಲಿ ಕೆರೆ-ಕಟ್ಟೆ ತುಂಬಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
    ಹೇಮಾವತಿ ಅಣೆಕಟ್ಟೆಯಿಂದ ಹೊರ ಬಿಡುತ್ತಿರುವ ನೀರಿನಲ್ಲಿ ಜಿಲ್ಲೆಯ ಕೆರೆ-ಕಟ್ಟೆಗಳನ್ನು ಭರ್ತಿ ಮಾಡುವ ಮೂಲಕ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕೆಂದು. ಈಗಾಗಲೇ ರಾಜ್ಯ ಸರ್ಕಾರ ಜಿಲ್ಲೆಯ 8 ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಣೆ ಮಾಡಿದೆ. ಕಳೆದ ವರ್ಷ ಮತ್ತು ಈ ವರ್ಷ ಮಳೆಯ ಅಭಾವದಿಂದ ಜಿಲ್ಲೆಯಲ್ಲೂ ಬರ ಪರಿಸ್ಥಿತಿ ತಲೆ ದೋರಿದ್ದು, ಈ ನಡುವೆ ಹೇಮಾವತಿ ಜಲಾಶಯದಲ್ಲಿ ಪ್ರಸ್ತುತ ನೀರು ಸಂಗ್ರಹ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ತುಂಬಾ ಕಡಿಮೆಯಾಗಿದೆ. ಪರಿಸ್ಥಿತಿ ಹೀಗಿದ್ದರೂ ಮಾ.13 ರಿಂದ ಎಡದಂಡೆ ಮೂಲಕ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ಏಕಾಏಕಿ ನೀರು ಹರಿಸಲಾಗುತ್ತಿದ್ದು, ಇದನ್ನು ನಿಲುಗಡೆ ಮಾಡಬೇಕು ಎಂದು ಮನವಿ ಮಾಡಿದರು.
    ಹೇಮಾವತಿ ಜಲಾಶಯದಲ್ಲಿ ನೀರು ಸಂಗ್ರಹ ಪ್ರಮಾಣ ಕಡಿಮೆ ಇರುವ ಕಾರಣ ಕಳೆದ ಸಾಲಿನಲ್ಲಿ ಅಚ್ಚುಕಟ್ಟು ಭಾಗದಲ್ಲಿ ಯಾವುದೇ ಬೆಳೆಗೆ ನೀರು ನೀಡಲಿಲ್ಲ. ಇದರಿಂದ ಲಕ್ಷಾಂತರ ರೈತರು ಬೆಳೆ ಕಳೆದುಕೊಳ್ಳಬೇಕಾಯಿತು. ನೀರಿಲ್ಲದೆ ಬೆಳೆ ನಷ್ಟ ಅನುಭವಿಸಿದ ರೈತರಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರವನ್ನೂ ನೀಡಲಿಲ್ಲ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಈವರೆಗೂ ರೈತರ ಹಿತ ಕಾಯದ ಸರ್ಕಾರ, ಇದೀಗ ಕುಡಿಯುವ ನೀರಿಗೂ ಸಮಸ್ಯೆ ತಂದೊಡ್ಡಲು ಮುಂದಾಗಿದೆ. ಮಳೆಗಾಲ ಆರಂಭವಾಗುವವರೆಗೂ ಹೇಮಾವತಿ ಜಲಾಶಯದಲ್ಲಿ ನೀರನ್ನು ಉಳಿಸಬೇಕು ಎಂದು ಜಿಲ್ಲೆಯ ಜನರ ಪರವಾಗಿ ಮನವಿ ಮಾಡಿದರು.
    ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಸ್.ಲಿಂಗೇಶ್, ತಾಲ್ಲೂಕು ಅಧ್ಯಕ್ಷ ದ್ಯಾವೇಗೌಡ, ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ, ಮುಖಂಡರಾದ ಹೊನ್ನವಳ್ಳಿ ಸತೀಶ್, ಕಮಲ್‌ಕುಮಾರ್, ಲಕ್ಷ್ಮಣಗೌಡ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts