More

    ಜೆಡಿಎಸ್ ಭವನ ನಿರ್ವಾಣಕ್ಕೆ ನಾಳೆ ಅಡಿಗಲ್ಲು

    ಕೋಲಾರ: ಜಿಲ್ಲೆಯಲ್ಲಿ ಜೆಡಿಎಸ್ ಮರು ಸಂಟಿಸಲು ಗ್ರಾಪಂ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ, ಎಲ್ಲ ಕ್ಷೇತ್ರಗಳಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಕಣಕ್ಕೆ ಇಳಿಸಲಾಗುವುದು ಎಂದು ವಾಜಿ ಶಾಸಕ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.

    ಗ್ರಾಪಂ ನಂತರ ತಾಪಂ, ಜಿಪಂ ಚುನಾವಣೆ ನಡೆಯಲಿರುವುದರಿಂದ ಪಕ್ಷ ಬಲಪಡಿಸಲು ಗ್ರಾಪಂ ಚುನಾವಣೆ ಅಸ್ತ್ರವಾಗಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ನಗರದಲ್ಲಿ ಪಕ್ಷದ ನಿವೇಶನವಿದ್ದರೂ ಕಟ್ಟಡ ನಿರ್ವಾಣಕ್ಕೆ ಕಾಲ ಕೂಡಿ ಬಂದಿರಲಿಲ್ಲ. ಡಿ.9ರಂದು ಬೆಳಗ್ಗೆ 9ಕ್ಕೆ ವಾಜಿ ಸಿಎಂ ಎಚ್.ಡಿ.ಕುವಾರಸ್ವಾಮಿ ಶಂಕುಸ್ಥಾಪನೆ ನೆರವೇರಿಸಲಿದ್ದು, ವರ್ಷದೊಳಗೆ ಭವನ ನಿರ್ವಾಣವಾಗಲಿದೆ.
    ಅದೇ ದಿನ ನಗರ ಹೊರವಲಯದ ರತ್ನ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10ಕ್ಕೆ ಪಕ್ಷದ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ ಎಂದರು.

    ಕರೊನಾ ಹಿನ್ನೆಲೆಯಲ್ಲಿ ಹೆಚ್ಚಿನ ಕಾರ್ಯಕರ್ತರನ್ನು ಸೇರಿಸಲಾಗುತ್ತಿಲ್ಲ, ಜಿಲ್ಲೆಯ 6 ವಿಧಾನಸಭಾ ಕ್ಷೇತ್ರದಿಂದ ಪ್ರಮುಖ ಕಾರ್ಯಕರ್ತರನ್ನು ವಾತ್ರ ಆಹ್ವಾನಿಸಲಾಗಿದೆ ಎಂದರು.

    ನಿಖಿಲ್‌ಗೆ ಭವ್ಯ ಸ್ವಾಗತ: ಕಾರ್ಯಕ್ರಮದಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುವಾರಸ್ವಾಮಿ ಸಹ ಭಾಗವಹಿಸಲಿದ್ದಾರೆ. ಮೊದಲ ಬಾರಿಗೆ ಕೋಲಾರಕ್ಕೆ ಆಗಮಿಸುತ್ತಿರುವುದರಿಂದ ಭವ್ಯ ಸ್ವಾಗತ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಹೇಳಿದರು.

    ಅಂದು ಕೊಂಡರಾಜನಹಳ್ಳಿಯ ಆಂಜನೇಯಸ್ವಾಮಿ ದೇವಾಲಯ ಬಳಿಯಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬೈಕ್ ರ‌್ಯಾಲಿ ಮೂಲಕ ನಿಖಿಲ್ ಅವರನ್ನು ಕರೆದೊಯ್ಯಲಾಗುವುದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ, ರತ್ನ ಕಲ್ಯಾಣ ಮಂದಿರದಲ್ಲಿ ಹೆಚ್ಚು ಜನ ಕೂರಲು ಸ್ಥಳವಿಲ್ಲದ ಕಾರಣ, ಕಲ್ಯಾಣ ಮಂದಿರದ ಹೊರಗೆ ಎಲ್‌ಇಡಿ ಪರದೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವಿವರಿಸಿದರು.

    ಪಕ್ಷದ ಭವನ ನಿರ್ವಾಣಕ್ಕೆ ದೇಣಿಗೆ ನೀಡಲು ಈಗಾಗಲೆ ಹಲವು ದಾನಿಗಳು ಮುಂದೆ ಬಂದಿದ್ದಾರೆ ಎಂದರು.
    ಜಿಪಂ ಸದಸ್ಯ ಕಿತ್ತಂಡೂರು ಕೆ.ಎಸ್.ನಂಜುಂಡಪ್ಪ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ, ತಾಲೂಕು ಅಧ್ಯಕ್ಷ ಬಾಬು ಮೌನಿ, ಮುಖಂಡರಾದ ಸಿಎಂಆರ್ ಶ್ರೀನಾಥ್, ವಕ್ಕಲೇರಿ ರಾಮು, ಡಾ.ರಮೇಶ್, ಬೆಳವಾರನಹಳ್ಳಿ ಆನಂದ್, ಬಣಕನಹಳ್ಳಿ ನಟರಾಜ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts