More

    ಜೇನು ಸಾಕಾಣಿಕೆಗೆ ಸರ್ಕಾರದಿಂದ ಸಾಕಷ್ಟು ನೆರವು

    ಸೊರಬ: ಖಾದಿ ಗ್ರಾಮೋದ್ಯೋಗ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಸಂಕಷ್ಟಗಳನ್ನು ಹೋಗಲಾಡಿಸಲು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು ಜನರನ್ನು ಉತ್ತೇಜನಗೊಳಿಸಲಾಗಿದೆ ಎಂದು ಕೇಂದ್ರ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷ ಮನೋಜ್ ಕುಮಾರ್ ಹೇಳಿದರು.
    ಶುಕ್ರವಾರ ತಾಲೂಕಿನ ನಿಸರಾಣಿ ಗ್ರಾಮದಲ್ಲಿ ಮಧುಬನ ಜೇನು ಸಂಸ್ಕರಣಾ ಹಾಗೂ ಮಾರಾಟ ಸಹಕಾರ ಸಂಘ, ರಾಜ್ಯ ಖಾದಿ ಗ್ರಾಮೋದ್ಯೋಗ ಆಯೋಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜೇನು ತರಬೇತಿದಾರರಿಗೆ ಪ್ರಮಾಣಪತ್ರ ಹಾಗೂ ಜೇನು ಸಾಕಣೆ ಪೆಟ್ಟಿಗೆ ವಿತರಿಸಿ ಅವರು ಮಾತನಾಡಿದರು.
    ಗ್ರಾಮೀಣ ಪ್ರದೇಶದ ಯುವಕರ ಸಬಲೀಕರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 12 ಸಾವಿರ ಕೋಟಿ ರೂ. ಅನುದಾನ ಮೀಸಲಿರಿಸಿದೆ. ಇದರಲ್ಲಿ ಜೇನು ಸಾಕಾಣಿಕೆಗೆ 500 ಕೋಟಿ ರೂ. ಅನುದಾನ ಬಳಸಿಕೊಂಡು ಫಲಾನುಭವಿಗಳಿಗೆ ಪ್ರೋತ್ಸಾಹ ಧನ, ಸಲಕರಣೆ ವಿತರಣೆ ಮತ್ತು ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts