More

    ಜೈನಮುನಿ ಹತ್ಯೆಗೆ ವಿಜಯಸೇನೆ ಖಂಡನೆ


    ಚಿತ್ರದುರ್ಗ: ನಂದಿಪರ್ವತ ಆಶ್ರಮದ ಜೈನಮುನಿ ಶ್ರೀ ಕಾಮಕುಮಾರ ಮಹಾರಾಜರ ಹತ್ಯೆ ಖಂಡಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಸರ್ವ ಧರ್ಮ ಗುರುಗಳಿಗೆ, ಮಠಾಧೀಶರಿಗೆ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು. ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಜಿಲ್ಲಾಧ್ಯಕ್ಷೆ ವೀಣಾ, ಜಗದೀಶ್, ಅವಿನಾಶ್, ನಾಗರಾಜ್ ಮುತ್ತು, ಅಖಿಲೇಶ್, ಮಣಿಕಂಠ, ಆರ್.ಪ್ರದೀಪ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts