ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿರಲಿ:ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಸೂಚನೆ

ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿರಲಿ:ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಸೂಚನೆ
Published on

ಹಾಸನ: ಜಿಲ್ಲೆಯಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಗಳಂತೆ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ತ್ಯಾಜ್ಯವನ್ನು ನಿಗದಿತ ಅವಧಿಯೊಳಗೆ ಸಂಗ್ರಹಿಸಲು ಕ್ರಮ ವಹಿಸಬೇಕು ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು ತರಬೇತಿ ನೀಡಲು ಕಾರ್ಯಕ್ರಮ ಆಯೋಜಿಸಬೇಕು. ಈ ಸಂಬಂಧ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರಲ್ಲದೆ, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಕಲ್ಪಿಸಲು ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಹಿಮ್ಸ್ ವೈದ್ಯಕೀಯ ಅಧಿಕ್ಷಕ ಡಾ.ಕೃಷ್ಣಮೂರ್ತಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಹರೀಶ್, ಆರ್‌ಸಿಎಚ್ ಅಧಿಕಾರಿ ಡಾ.ಚೇತನ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net