More

    ಟಿಎಂಸಿ ವಿರುದ್ಧ ಕ್ರಮಕ್ಕೆ ಆಗ್ರಹ

    ಚಿಕ್ಕೋಡಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಹಲ್ಲೆ ಖಂಡಿಸಿ ಬುಧವಾರ ಚಿಕ್ಕೋಡಿ ಪಟ್ಟಣದ ಬಸವ ವೃತ್ತದಲ್ಲ್ಲಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

    ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ ಮುಗಿದ ಬಳಿಕ ಟಿಎಂಸಿ ಕಾರ್ಯಕರ್ತರು ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಪಕ್ಷದ ಕಚೇರಿಗಳಿಗೆ ಬೆಂಕಿ ಹಾಕಿ ನಾಶ ಮಾಡುತ್ತಿದ್ದಾರೆ. ಅಲ್ಲದೆ, 11 ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ. ಕೂಡಲೇ ಸೂಕ್ತ ತನಿಖೆ ನಡೆಸಿ, ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

    ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ ಮಾತನಾಡಿ, ಚುನಾವಣೆಯ ಫಲಿತಾಂಶದ ನಂತರ ಟಿಎಂಸಿ ಕಾರ್ಯಕರ್ತರು ಉದ್ದೇಶಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುತ್ತಿದ್ದಾರೆ. ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಕಾರ್ಯಕರ್ತರಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಶಾಂಭವಿ ಅಶ್ವತ್ಥಪುರ, ಚಿಕ್ಕೋಡಿ ಮಂಡಳ ಅಧ್ಯಕ್ಷ ಸಂಜಯ ಪಾಟೀಲ, ಮಹಿಳಾ ಮೋರ್ಚಾ ಮಂಡಳ ಅಧ್ಯಕ್ಷ ಶಕುಂತಲಾ ಡೊಣವಾಡೆ, ಅಪ್ಪಾಸಾಹೇಬ ಚೌಗಲೆ, ವಿಶ್ವನಾಥ ಕಾಮಗೌಡ, ಸುಮಾ ಗವಿ, ರಾಧಿಕಾ ಅಡಕೆ, ಸುವರ್ಣಾ ಹಂಪಣ್ಣವರ, ಹರೀಶ ಚೌಗಲಾ, ವೀರೇಂದ್ರ ಗವಿ, ಸಿದ್ದು ನರಟ್ಟಿ, ಪವನ ರಾವ, ಶಾಂತಾರಾಮ ಕಾಗಲೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts