More

    ಟಿಕೆಟ್ ಆಕಾಂಕ್ಷಿಗಳ ಒಗ್ಗೂಡಿಸಲು ಅಖಾಡಕ್ಕೆ ಕಾಗೋಡು ತಿಮ್ಮಪ್ಪ

    ಸಾಗರ: ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಅ„ಕವಾಗಿದ್ದರೂ, ಪಕ್ಷ ಬೇಳೂರು ಗೋಪಾಲಕೃಷ್ಣ ಅವರ ಹೆಸರು ಘೋಷಣೆ ಮಾಡಿದ ನಂತರ ಎಲ್ಲ ಆಕಾಂಕ್ಷಿಗಳನ್ನು ಒಗ್ಗೂಡಿಸುವ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿದೆ. ಪುತ್ರಿ ಡಾ. ರಾಜನಂದಿನಿ ಪರವಾಗಿ ಟಿಕೆಟ್ ಲಾಬಿ ಮಾಡಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪಕ್ಷ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ನಂತರ ಎಲ್ಲ ಟಿಕೆಟ್ ಆಕಾಂಕ್ಷಿಗಳನ್ನು ಒಗ್ಗೂಡಿಸಿ ಪಕ್ಷದ ಪರವಾಗಿ ಕೆಲಸ ಮಾಡಲು ವೇದಿಕೆ ನಿರ್ಮಿಸಲು ಆರಂಭಿಸಿದ್ದಾರೆ.
    ಗೋಪಾಲಕೃಷ್ಣ ಬೇಳೂರು ಅವರಿಗೆ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಎಂದಿನಂತೆ ಆಕಾಂಕ್ಷಿಗಳು ಬಂಡಾಯ ಏಳುತ್ತಿರುವುದನ್ನು ಕಂಡ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಎಲ್ಲವನ್ನು ಸರಿಪಡಿಸಲು ತಾವೇ ಅಖಾಡಕ್ಕೆ ಇಳಿದಿz್ದÁರೆ.
    ಸೋಮವಾರ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಗೋಪಾಲಕೃಷ್ಣ ಬೇಳೂರು ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಎಲ್ಲರೂ ಒಟ್ಟಾಗಿ ಬೇಳೂರು ಅವರನ್ನು ಗೆಲ್ಲಿಸುವ ಮೂಲಕ ಪಕ್ಷವನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
    ಈ ಚುನಾವಣೆ ಅಗ್ನಿ ಪರೀಕ್ಷೆಯೂ ಹೌದು. ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಟಿಕೆಟ್ ಸಿಕ್ಕಿಲ್ಲ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಜತೆಯಲ್ಲಿ ಈಗಾಗಲೇ ನಾನು ಸಂಪರ್ಕದಲ್ಲಿದ್ದೇನೆ. ಎಲ್ಲರೂ ಒಟ್ಟಾಗಿ ಪಕ್ಷವನ್ನು ಮುನ್ನಡೆಸೋಣ ಎಂದು ಸಲಹೆ ನೀಡಿದರು.
    ಸಾಗರದಲ್ಲಿ ಐದು ವರ್ಷಗಳ ಕಾಲ ಅಭಿವೃದ್ಧಿ ಕುಂಠಿತವಾಗಿದೆ. ಕ್ಷೇತ್ರದ ಶಾಸಕರು ಬಡವರಿಗೆ ಒಂದೇ ಒಂದು ಮನೆಯನ್ನೂ ಹಂಚಲಿಲ್ಲ. ಕಾಂಗ್ರೆಸ್ ಆಡಳಿತದಲ್ಲಿz್ದÁಗ ರಾಜ್ಯದಲ್ಲಿ 15 ಲಕ್ಷ ಮನೆಗಳನ್ನು ನೀಡಲಾಗಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೇವಲ ಸುಳ್ಳು ಭರವಸೆಗಳನ್ನು ಕೊಟ್ಟು ಜನರಿಗೆ ಮೋಸ ಮಾಡುತ್ತಿವೆ. ಅವರಲ್ಲಿ ಬದ್ಧತೆಯೂ ಇಲ್ಲ ಎಂದು ಕಿಡಿಕಾರಿದರು.
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ದೇಶ ಮತ್ತು ರಾಜ್ಯದ ಹಿತದೃಷ್ಟಿಯಿಂದ ಬಂದಿರುವ ಗಂಡಾಂತರವನ್ನು ಎದುರಿಸಬೇಕಾಗಿದೆ. ಈಗ ಆಳುತ್ತಿರುವ ಸರ್ಕಾರಗಳು ಸಂವಿಧಾನದ ಆಶಯಕ್ಕೆ ತಿಲಾಂಜಲಿ ಇಟ್ಟು ಎಗ್ಗಿಲ್ಲದೆ ಭ್ರಷ್ಟಾಚಾರ ನಡೆಸುತ್ತಿವೆ. ಈ ಹೊತ್ತಿನಲ್ಲಿ ಯಾರೂ ಬಂಡಾಯ ಏಳಬಾರದು. ದೇಶ ಮತ್ತು ರಾಜ್ಯದ ಹಿತದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು.
    ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶ್‍ಬಾಬು, ಮಕ್ಬೂಲï ಅಹಮದ್, ಗಣಪತಿ ಮಂಡಗಳಲೆ, ಮಧುಮಾಲತಿ, ಮೈಕಲï ಡಿಸೋಜ, ನಂದಾ ಗೊಜನೂರು, ಡಿ.ದಿನೇಶ್ ಇತರರಿದ್ದರು.
    ಹಕ್ರೆ, ಹೊನಗೋಡು: ಈಗಾಗಲೇ ಸಾಗರ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ್ ಅವರು ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಪ್ರತ್ಯೇಕವಾಗಿ ಬೆಂಬಲಿಗರ ಸಭೆ ನಡೆಸಿ ಅವರ ಅಭಿಪ್ರಾಯವನ್ನು ಸಂಗ್ರಹಿಸುತ್ತಿz್ದÁರೆ. ಆನಂದಪುರ ಭಾಗದ ಪ್ರಮುಖ, ಜಿಪಂ ಮಾಜಿ ಸದಸ್ಯ ಹೊನಗೋಡು ರತ್ನಾಕರ್ ಕೂಡ ಬಂಡಾಯದ ಬಾವುಟ ಹಾರಿಸುತ್ತಿz್ದÁರೆ. ಈ ಹಿನ್ನೆಲೆಯಲ್ಲಿ ಸ್ವತಃ ಕಾಗೋಡು ತಿಮ್ಮಪ್ಪ ಅವರೇ ಅಖಾಡಕ್ಕಿಳಿದು ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಪರವಾಗಿ ಬ್ಯಾಟಿಂಗ್ ಮಾಡಲು ಆರಂಭಿಸಿz್ದÁರೆ.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts