

ಉಳ್ಳಾಲ: ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42ನೇ ರಾಜ್ಯಮಟ್ಟದ ಟೇಕ್ವಾಂಡೋ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಶಾರದಾ ವಿದ್ಯಾನಿಕೇತನ ಶಾಲೆಯ ನಿಧಿ ಸುವರ್ಣ ಒಂದು ಚಿನ್ನ ಮತ್ತು ಒಂದು ಕಂಚಿನ ಪದಕ ಹಾಗೂ ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ವಿಷ್ಣು ವಿಶ್ವನಾಥ್ ಒಂದು ಬೆಳ್ಳಿ ಹಾಗೂ ಆಶ್ರಿತ ಶೆಟ್ಟಿ ಒಂದು ಕಂಚಿನ ಪದಕ ಪಡೆದಿದ್ದಾರೆ.
ಕ್ರೀಡಾಪಟುಗಳಿಗೆ ಡಾ.ಗುರುರಾಜ್ ಇಟಗಿ ಹಾಗೂ ನಿಖಿಲ್ ಎನ್.ಶೆಟ್ಟಿ ಅವರಲ್ಲಿ ತರಬೇತಿ ನೀಡಿದ್ದಾರೆ. ಚಿನ್ನದ ಪದಕ ವಿಜೇತೆ ನಿಧಿ ಸುವರ್ಣ ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಜೂನಿಯರ್ ಟೇಕ್ವಾಂಡೋ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್, ಪ್ರಾಂಶುಪಾಲ ವಿನಾಯಕ್ ಬಿ.ಜಿ., ಮೋಹನ್ದಾಸ್, ಸುಷ್ಮಾ ದಿನಕರ್ ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.