More

    ಟ್ಯಾಂಕರ್ ಮೂಲಕ ನೀರು ಪೂರೈಸಿ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನವನಗರದ ಭಾಗದಲ್ಲಿ ಪ್ರತಿ 10 ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡುವ ಸ್ಥಿತಿ ನಿರ್ವಣವಾಗಿರುವುದು ಸಹನೀಯವಲ್ಲ. ನಾಗರಿಕರಿಗೆ ತುರ್ತಾಗಿ ಅಗತ್ಯವಿರುವೆಡೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಪಾಲಿಕೆ ವಲಯ ಕಚೇರಿ (ನಂ. 4)ಯಲ್ಲಿ ಭಾನುವಾರ ಸಂಜೆ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊಳವೆ ಬಾವಿಯ ದುರಸ್ತಿ ಮಾಡಿಸಬೇಕು. 10 ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆ ಮಾಡುವುದು ಸರಿಯಲ್ಲ. ಈ ಅವ್ಯವಸ್ಥೆಯನ್ನು ತ್ವರಿತವಾಗಿ ಸರಿಪಡಿಸಬೇಕು. ಕನಿಷ್ಠ 5 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಪಾಲಿಕೆ ಸದಸ್ಯರಾದ ಸುನೀತಾ ಮಾಳವದಕರ, ಮಂಜುನಾಥ ಬುರ್ಲಿ, ನರೇಂದ್ರ ಕುಲಕರ್ಣಿ, ಕಾರ್ಯನಿರ್ವಾಹಕ ಇಂಜಿನಿಯರ್ ರವಿಕುಮಾರ, ಎಲ್ ಆಂಡ್ ಟಿ ಅಧಿಕಾರಿ ಅಭಿದಾಸ, ವಲಯ ಕಚೇರಿ ಸಹಾಯಕ ಆಯುಕ್ತ ರಮೇಶ ನೂಲ್ವಿ, ಕೆಯುಐಡಿಎಫ್​ಸಿ ಅಧಿಕಾರಿಗಳು ಇದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts