More

    ಟ್ರ್ಯಾಕ್ಟರ್​ನೊಂದಿಗೆ ಪ್ರತಿಭಟನೆ ನಡೆಸಿದ ರೈತರು

    ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಹುಬ್ಬಳ್ಳಿಯಲ್ಲಿ ಸೋಮವಾರ ಟ್ರ್ಯಾಕ್ಟರ್​ನೊಂದಿಗೆ ಪ್ರತಿಭಟನೆ ನಡೆಸಿದರು.

    ಕರ್ನಾಟಕ ರೈತರ ಸಂಘದ ನೇತೃತ್ವದಲ್ಲಿ ನಗರ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ ರೈತರು ಅಲ್ಲಿಂದ ಕಿತ್ತೂರ ಚನ್ನಮ್ಮ ವೃತ್ತದವರಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ಮಾರ್ಗ ಮಧ್ಯದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಕೊನೆಯಲ್ಲಿ ರಾಣಿ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಿನಿ ವಿಧಾನಸೌಧಕ್ಕೆ ತೆರಳಿ ಮನವಿ ಸಲ್ಲಿಸಿದರು.

    ಮಹದಾಯಿ ಯೋಜನೆಯನ್ನು ತ್ವರಿತವಾಗಿ ಜಾರಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಬಗರ್ ಹುಕುಂ ಕಾಯಿದೆಯಡಿ ರೈತರಿಗೆ ಹಕ್ಕು ಪತ್ರ ವಿತರಿಸಬೇಕು. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಅತಿವೃಷ್ಟಿಯಾದರೂ ಬಹಳಷ್ಟು ರೈತರಿಗೆ ಬೆಳೆ ವಿಮೆ ಪರಿಹಾರ ಸಿಕ್ಕಿಲ್ಲ. ಇದರಿಂದ ಸಾವಿರಾರು ರೈತರು ಸಾಲ ಸುಳಿಗೆ ಸಿಲುಕಿದ್ದಾರೆ. ಇನ್ನೊಮ್ಮೆ ಸಮೀಕ್ಷೆ ಮಾಡಿ ರೈತರಿಗೆ ಬೆಳೆ ವಿಮೆ ಪರಿಹಾರ ಸಂದಾಯ ಮಾಡಬೇಕು. ಕೃಷಿ ಕೂಲಿ ಕಾರ್ವಿುಕರ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮಂಡಿಸಿದ್ದಾರೆ.

    ಸಂಘದ ಅಧ್ಯಕ್ಷ ಸಿದ್ದರಾಜು ಕುಂದಗೋಳ, ಪ್ರಧಾನ ಕಾರ್ಯದರ್ಶಿ ಶಿವಾನಂದ ಹೊಸಳ್ಳಿ, ಸೋಮಣ್ಣ ಸವ್ವಾಸೆ, ಯಲ್ಲಪ್ಪ ತಡಸದ, ವೀರನಗೌಡ ಪಾಟೀಲ, ವಿರುಪಾಕ್ಷ ಹದ್ಲಿ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts