More

    ಡಾ.ಅಂಬೇಡ್ಕರ್ ಒಬ್ಬ ಶ್ರೇಷ್ಠ ತತ್ವಜ್ಞಾನಿ


    ಯಾದಗಿರಿ: ಇಡೀ ವಿಶ್ವ ಮೆಚ್ಚಿಕೊಳ್ಳುವಂತ ಬಲಿಷ್ಠ ಸಂವಿಧಾನ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಒಬ್ಬ ಶ್ರೇಷ್ಠ ತತ್ವಜ್ಞಾನಿಯಾಗಿದ್ದಾರೆ ಎಂದು ತಾಪಂ ಸಹಾಯಕ ನಿರ್ದೇಶಕ ಭೀಮಣ್ಣಗೌಡ ಬಿರಾದಾರ ತಿಳಿಸಿದರು.

    ಜಿಲ್ಲಾಡಳಿತ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಹಯೋಗದಲ್ಲಿ ಶಹಾಪುರ ತಾಲೂಕಿನ ಚಟ್ನಳ್ಳಿ, ಶಿರವಾಳ, ಅಣಬಿ ಗ್ರಾಮಕ್ಕೆ ಭಾನುವಾರ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಕ್ಕೆ ಸ್ವಾಗತಿಸಿ ಮಾತನಾಡಿ, ಡಾ.ಬಿಆರ್ ಅಂಬೇಡ್ಕರ್ರ ತತ್ವ-ಸಿದ್ದಾಂತಗಳ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ಜಾಗೃತಿ ಜಾಥಾವನ್ನು ರಾಜ್ಯಾದ್ಯಂತ ಏಕಕಾಲದಲ್ಲಿ ಆರಂಭಿಸಲಾಗಿದ್ದು, ಫೆ.23ರ ವರೆಗೆ ಪ್ರತಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಫೆ. 25ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ರಾಷ್ಟ್ರೀಯ ಸಂವಿಧಾನ ಜಾಗೃತಿ ಸಮಾವೇಶ ಆಯೋಜಿಸಿದ್ದು, ಅಲ್ಲಿ ಸಮಾರೋಪಗೊಳ್ಳಲಿದೆ ಎಂದು ಹೇಳಿದರು.

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು-ಸಮಪಾಲು ನೀಡಿದೆ. ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ, ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ, ಘನತೆ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕು

    ಚಟ್ನಳ್ಳಿ ಗ್ರಾಮದ ಅಂಬೇಡ್ಕರ್ ವೃತ್ತದಿಂದ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆವರೆಗೆ ಡೊಳ್ಳು ಕುಣಿತ, ಶಾಲಾ ಮಕ್ಕಳೊಂದಿಗೆ ರಥಯಾತ್ರೆಯನ್ನು ಭವ್ಯವಾಗಿ ಮೆರವಣಿಗೆ ಮೂಲಕ ಸ್ವಾಗತಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts