More

    ಡಾ.ಅಂಬೇಡ್ಕರ್ ತತ್ವ, ಆದರ್ಶ ಪಾಲಿಸಿ

    ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ, ಆದರ್ಶವನ್ನು ಪಾಲನೆ ಮಾಡಬೇಕು ಎಂದು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಹೇಳಿದರು.


    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಮುಕ್ತಗಂಗೋತ್ರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.


    ಕಾನೂನು ಕ್ಷೇತ್ರಕ್ಕೆ ಅಂಬೇಡ್ಕರ್ ಸಲ್ಲಿಸಿದ ಕೊಡುಗೆ, ಸಂವಿಧಾನ ರಚನೆಯಲ್ಲಿ ನಿರ್ವಹಿಸಿದ ಕಾರ್ಯಗಳ ಬಗ್ಗೆ ಸ್ಮರಿಸಿದ ಅವರು, ಸ್ವಾತಂತ್ರೃ ಪೂರ್ವ ಭಾರತದಲ್ಲಿ ಮಹಾರಾಷ್ಟ್ರ ಪ್ರಾಂತ್ಯದಲ್ಲಿ ಸಚಿವರಾಗಿದ್ದ ಸರ್ ಸಿದ್ದಪ್ಪ ತೋಟಪ್ಪ ಕಂಬ್ಳಿ ಅವರು ಅಂಬೇಡ್ಕರ್ ಅವರಿಗೆ ಮಾಡಿದ ಸಹಾಯ ಮತ್ತು ಪ್ರೋತ್ಸಾಹದ ಕುರಿತು ಮೆಲುಕು ಹಾಕಿದರು. ಬುದ್ಧ, ಬಸವ, ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸುವುದಷ್ಟೇ ಅಲ್ಲದೆ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.


    ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ, ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷ, ಡೀನ್(ಶೈಕ್ಷಣಿಕ) ಪ್ರೊ.ಎನ್.ಲಕ್ಷ್ಮೀ ಕುಲಸಚಿವ(ಪರೀಕ್ಷಾಂಗ) ಪ್ರೊ.ಕೆ.ಬಿ.ಪ್ರವೀಣ್, ಡೀನ್ (ಆಡಳಿತ) ಡಾ.ರಮಾನಾಥಂ ನಾಯ್ಡು, ಕೇಂದ್ರದ ಸಂಯೋಜನಾಧಿಕಾರಿ ಡಾ.ಶಿವಕುಮಾರಸ್ವಾಮಿ ಇನ್ನಿತರರು ಇದ್ದರು. ಅಲ್ಲದೆ, ಪುರಭವನದ ಎದುರಿನ ಅಂಬೇಡ್ಕರ್ ಪ್ರತಿಮೆಗೆ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮಾಲಾರ್ಪಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts