More

    ಡಾ.ಕೋರೆಯಿಂದ ಕೆಎಲ್‌ಇಗೆ ಕೀರ್ತಿ

    ಬೆಳಗಾವಿ: ಬಹುಮುಖಿ ವ್ಯಕ್ತಿತ್ವದ ಡಾ.ಪ್ರಭಾಕರ ಕೋರೆ ಅವರು ಶಿಕ್ಷಣ, ಆರೋಗ್ಯ, ಕೃಷಿ ಹಾಗೂ ಸಂಶೋಧನೆ, ರಾಜಕೀಯ ಕ್ಷೇತ್ರದಲ್ಲಿ ಅಗಾಧವಾದುದನ್ನು ಸಾಧಿಸಿ ಕೆಎಲ್‌ಇ ಸಂಸ್ಥೆಯನ್ನು ಜಾಗತಿಕ ಭೂಪಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

    ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ, ರಾಜ್ಯಸಭಾ ಮಾಜಿ ಸದಸ್ಯ ಡಾ.ಪ್ರಭಾಕರ ಕೋರೆ ಅವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಆಚರಣೆ ಕುರಿತು ಲಿಂಗರಾಜ ಕಾಲೇಜು ಕೇಂದ್ರ ಸಭಾಗೃಹದಲ್ಲಿ ಮಂಗಳವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

    ಡಾ.ಕೋರೆ ಅವರು ಉತ್ತರ ಕರ್ನಾಟಕದ ಧೀಮಂತ ನಾಯಕರಾಗಿ, ರೈತರ ಕಷ್ಟಗಳಿಗೆ ಸ್ಪಂದಿಸುತ್ತ, ಬಡಜನರಿಗೆ ಶಿಕ್ಷಣದ ಮೂಲಕ ತಮ್ಮ ಜೀವನ ಉಜ್ವಲಗೊಳಿಸುವ ಅವಕಾಶ ಕಲ್ಪಿಸಿದ್ದಾರೆ. ಈ ಭಾಗದ ಜನರಿಗೆ ಅತ್ಯಾಧುನಿಕ ಆರೋಗ್ಯ, ಆರೈಕೆಯ ವೈದ್ಯಕೀಯ ಸೇವೆಗಳು ದೊರೆಯುವ ನಿಟ್ಟಿನಲ್ಲಿ ಕೆಎಲ್‌ಇ ಆಸ್ಪತ್ರೆಗಳನ್ನು ನಿರ್ಮಿಸಿ ಸುಮಾರು 1,700 ಹಾಸಿಗೆಗಳನ್ನು ಬಡಜನರಿಗೆ ಉಚಿತವಾಗಿ ಮೀಸಲಿರಿಸಿದ್ದಾರೆ. ಅವರು ಇಡಿ ಸಮಾಜದ, ಕರ್ನಾಟಕದ ಆಸ್ತಿಯಾಗಿದ್ದಾರೆ. ಅವರ ಹುಟ್ಟುಹಬ್ಬದ ಅಮೃತ ಮಹೋತ್ಸವವನ್ನು ನಾವೆಲ್ಲರೂ ಒಟ್ಟಾಗಿ ಯಶಸ್ವಿಯಾಗಿಸುವುದು ನಮ್ಮ ಜವಾಬ್ದಾರಿ ಎಂದರು.

    ಸಮಾರಂಭಕ್ಕೆ ಕೇಂದ್ರ ಶಿಕ್ಷಣ, ಕೌಶಲ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

    ಕೆಎಲ್‌ಇ ಅಧ್ಯಕ್ಷ ಮಹಾಂತೇಶ ಕೌಜಲಗಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ರಾಜು ಕಾಗೆ, ವಿಜಯ ಮೋರೆ, ಬಿಜೆಪಿ ರಾಜ್ಯ ವಕ್ತಾರ ಎಂ.ಬಿ.ಜಿರಲಿ ಮಾತನಾಡಿ, ಸಮಾಜದ ಮುಖಂಡರು ಸೇರಿಕೊಂಡು ಯಶಸ್ವಿಯಾಗಿ ಅಮೃತ ಮಹೋತ್ಸವ ಆಚರಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸೋಣ ಎಂದರು.

    ಮಹೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು, ಸಕಲ ಸಿದ್ಧತೆ ಮಾಡಿಕೊಂಡು ಪಕ್ಷಾತೀತವಾಗಿ ಅಚ್ಚುಕಟ್ಟಾಗಿ ಆಯೋಜಿಸಲು ಸಲಹೆ ನೀಡಿದರು.

    ಶಾಸಕ ಡಿ.ಎಂ.ಐಹೊಳೆ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಮಾಜಿ ಶಾಸಕರಾದ ಜಗದೀಶ ಮೆಟಗುಡ್ಡ, ಮಾಜಿ ಸಂಸದ ಅಮರಸಿಂಹ ಪಾಟೀಲ, ಗೋಕಾಕದ ಅಶೋಕ ಪೂಜಾರಿ, ರಾಮಣ್ಣ ಹುಕ್ಕೇರಿ, ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಸಕ್ಕರೆ ಕಾರ್ಖಾನೆ ನಿರ್ದೇಶಕ ಮಂಡಳಿಯ ಸದಸ್ಯರು, ಡಾ.ಪ್ರಭಾಕರ ಕೋರೆ ಸಹಕಾರಿ ಕ್ರೆಡಿಟ್ ಸೌಹಾರ್ದ ಸಂಸ್ಥೆಯ ಪದಾಧಿಕಾರಿಗಳು ಸೇರಿ ಸುಮಾರು 250ಕ್ಕೂ
    ಹೆಚ್ಚು ಗಣ್ಯರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts