More

    ಡಾ.ಚಂದ್ರಮೌಳಿ ದಂಪತಿಗೆ ಸರ್ಕಾರಿ ಶಾಲೆಯಲ್ಲಿ ಸನ್ಮಾನ

    ಸೋಮವಾರಪೇಟೆ: ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 50 ಸಾವಿರ ರೂ. ನೀಡಿದ ಶಾಲೆಯ ಹಳೆಯ ವಿದ್ಯಾರ್ಥಿ ಡಾ.ಚಂದ್ರಮೌಳಿ ದಂಪತಿಯನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶುಕ್ರವಾರ ಸನ್ಮಾನಿಸಿದರು.


    ಪ್ರಸ್ತುತ ಅಮೆರಿಕದಲ್ಲಿ ಡಾ.ಚಂದ್ರಮೌಳಿ ಹಾಗೂ ಪಾರ್ವತಿ ನೆಲೆಸಿದ್ದು, ಕಂಪ್ಯೂಟರ್ ಶಿಕ್ಷಣ ಹಾಗೂ ಗ್ರಾಮೀಣ ಮಕ್ಕಳಿಗೆ ಎರಡು ವರ್ಷದಿಂದ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಂಪತಿಯನ್ನು ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.


    ಮುಖ್ಯ ಶಿಕ್ಷಕ ಶಿವಕುಮಾರ್ ಮಾತನಾಡಿ, ಸರ್ಕಾರಿ ಶಾಲೆಯ ಅಭಿವೃದ್ಧಿಯಲ್ಲಿ ಡಾ.ಚಂದ್ರಮೌಳಿ ಅವರ ಸಹಕಾರ ಅಪಾರ. ತಾವು ಓದಿದ ಶಾಲೆಗೆ ಎರಡು ವರ್ಷಗಳಿಂದ ಧನಸಹಾಯ ಮಾಡುತ್ತಿದ್ದಾರೆ. ಅಲ್ಲದೆ ಮಕ್ಕಳಿಗೆ ಶೌಚಗೃಹ, ಗ್ರಂಥಾಲಯವನ್ನು ನಿರ್ಮಿಸಿಕೊಟ್ಟಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು, ಬಡವರ ಮಕ್ಕಳು ಶಾಲೆಯಲ್ಲಿ ಕಲಿಯುತ್ತಿರುವುದರಿಂದ ಉಪಯೋಗವಾಗಿದೆ ಎಂದು ಹೇಳಿದರು.


    ಶಾಲೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ಸೋಮಶೇಖರ ಆಚಾರ್ ಅವರನ್ನು ಸನ್ಮಾನಿಸಲಾಯಿತು. ಬೇಲೂರು ಪಂಚಾಯಿತಿ ಅಧ್ಯಕ್ಷ ಪ್ರಶಾಂತ್, ಉಪಾಧ್ಯಕ್ಷೆ ಸುಜಾತಾ, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ್, ಕ್ಷೇತ್ರ ಸಮನ್ವಯಾಧಿಕಾರಿ ಹೇಮಂತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ತಾಲೂಕು ಅಧ್ಯಕ್ಷ ಬಸವರಾಜ್, ದಾನಿಗಳಾದ ರವಿಶಂಕರ್, ಗುರುಪ್ರಸಾದ್, ಗುರುಮಲ್ಲೇಶ್, ಪ್ರಭುದೇವ್, ಮುಖ್ಯ ಶಿಕ್ಷಕ ಯೋಗೇಶ್, ಪಂಚಾಯಿತಿ ಸದಸ್ಯ ಸುದರ್ಶನ್, ಗ್ರಾಮದ ಮುಖಂಡ ಉಲ್ಲಾಸ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts