More

    ಡಾ.ಮಹಾಂತ ಶ್ರೀಗಳ ಆದರ್ಶ ಪಾಲಿಸಿ – ಜಿಲ್ಲಾಧಿಕಾರಿ ವೆಂಕಟೇಶ್ -ವ್ಯಸನಮುಕ್ತ ದಿನಾಚರಣೆ

    ದಾವಣಗೆರೆ: ಡಾ. ಮಹಾಂತ ಶಿವಯೋಗಿಗಳು ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
    ಡಾ.ಮಹಾಂತ ಶಿವಯೋಗಿಗಳ ಜನ್ಮದಿನವಾದ ಆಗಸ್ಟ್ 1 ಅನ್ನು ರಾಜ್ಯ ಸರ್ಕಾರವು ರಾಜ್ಯವ್ಯಾಪಿ ವ್ಯಸನಮುಕ್ತ ದಿನವಾಗಿ ಆಚರಿಸುತ್ತಿದ್ದು, ಕರ್ನಾಟಕವನ್ನು ದುಶ್ಚಟಮುಕ್ತ ರಾಜ್ಯವಾಗಿಸಲು ಸಾರ್ವಜನಿಕರು ಹಾಗೂ ಯುವಜನರಿಗೆ ಈ ಕಾರ್ಯಕ್ರಮ ಪ್ರೇರಣೆಯಾಗಿದೆ ಎಂದು ಹೇಳಿದರು.
    ದುರ್ವ್ಯಸನ, ದುಶ್ಚಟಗಳ ಬಗ್ಗೆ 1975ರಿಂದಲೇ ಶ್ರೀಗಳು ಮಹಾಂತ ಜೋಳಿಗೆ ಕಾರ್ಯಕ್ರಮ ರೂಪಿಸಿದ್ದರು. ಜನರ ವ್ಯಸನಗಳಿಗೆ ಕಾರಣವಾಗಿದ್ದ ವಸ್ತುಗಳನ್ನು ಜೋಳಿಗೆಯಲ್ಲಿ ಹಾಕಿಸಿಕೊಳ್ಳುವ ಜತೆಗೆ ಜಾಗೃತಿ ಅರಿವು ಮೂಡಿಸಿ, ಮನ ಪರಿವರ್ತನೆ ಮಾಡಿದರು. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದರು ಎಂದು ಸ್ಮರಿಸಿದರು.
    ವ್ಯಸನಮುಕ್ತ ವ್ಯಕ್ತಿ, ಕುಟುಂಬ, ಸಮಾಜ, ಗ್ರಾಮಗಳ ನಿರ್ಮಾಣ ಮಾಡುವ ಜತೆಗೆ ಕಾರ್ಯಕ್ರಮದಲ್ಲಿ ಪ್ರಮುಖರನ್ನು ಆಹ್ವಾನಿಸಿ ಜಾಗೃತಿ ಉಪನ್ಯಾಸಗಳನ್ನು ನಡೆಸುತ್ತಿದ್ದರು. ಮಕ್ಕಳು, ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ಚಟಗಳಿಗೆ ಬಲಿಯಾಗದಂತೆ ಸ್ವಾಮೀಜಿ ಅರಿವು ಮೂಡಿಸುತ್ತಿದ್ದರು. ಜಾತಿ-ಧರ್ಮ ಭೇದವಿಲ್ಲದೆ ಇಂಗ್ಲೆಂಡ್ ಸೇರಿ ವಿದೇಶದಲ್ಲೂ ತಮ್ಮ ಜೋಳಿಗೆಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದರು.
    ಜಿಪಂ ಸಿಇಒ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ. ಧನಂಜಯಪ್ಪ, ಎ.ಎಸ್.ಶಂಭುಲಿಂಗಪ್ಪ, ವಿಶ್ವ ಕರವೇ ಅಧ್ಯಕ್ಷ ಕೆ.ಜಿ.ಯಲ್ಲಪ್ಪ, ಶಶಿಧರ ಬಸಾಪುರ ಇತರರಿದ್ದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
    —-

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts