More

    ಡಾ.ರವಿ ಪಾಟೀಲ ಗೆಲುವಿಗೆ ಸಂಕಲ್ಪ

    ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಗೆಲುವಿಗಾಗಿ ಸ್ವಯಂ ಪ್ರೇರಿತರಾಗಿ ಜನರು ಬೆಂಬಲ ನೀಡುತ್ತಿದ್ದು ಬಿಜೆಪಿ ಹುಮ್ಮಸ್ಸು ಇಮ್ಮಡಿಗೊಳಿಸಿದೆ.

    ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳು, ಜನಪ್ರಿಯ ಯೋಜನೆಗಳು ಹಾಗೂ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತಿದ್ದೇವೆ. ಉತ್ತರ ಕ್ಷೇತ್ರದ ಎಲ್ಲ 33 ವಾರ್ಡ್‌ಗಳಲ್ಲಿನ ಮಹಾನಗರ ಪಾಲಿಕೆಯ ಬಿಜೆಪಿಯ ಹಾಲಿ ಮತ್ತು ಮಾಜಿ ಸದಸ್ಯರು ಬಿಜೆಪಿ ಗೆಲುವಿಗಾಗಿ ಸಂಕಲ್ಪ ತೊಟ್ಟಿದ್ದಾರೆ.

    ಕಳೆದೆರಡು ದಿನಗಳಿಂದ ರಾಮತೀರ್ಥ ನಗರ, ಮಹಾಂತೇಶ ನಗರ, ಗಾಂಧಿನ ನಗರ, ಆಜಂ ನಗರ, ಹನುಮಾನ ನಗರ, ಶಿವಬಸವ ನಗರ, ನೆಹರು ನಗರ, ಗಣಪತಿ ಗಲ್ಲಿ, ಖಡೇಬಜಾರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಎರಡು ಸಮಯದಲ್ಲಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಹಾಕುವಂತೆ ವಿವಿಧ ವೃತ್ತಿಯಲ್ಲಿರುವ ವಕೀಲರು, ವೈದ್ಯರು, ವ್ಯಾಪಾರಿಗಳು, ಆಟೋ ಚಾಲಕರು ಸ್ವಯಂ ಪ್ರೇರಿತರಾಗಿ ಡಾ. ರವಿ ಪಾಟೀಲ ಪರವಾಗಿ ಮತಯಾಚನೆ ಮಾಡುತ್ತಿರುವುದು ವಿಶೇಷ ಎನ್ನಲಾಗಿದೆ.
    ಉತ್ತರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಅವರು ಹಿರಿಯ ನಾಗರಿಕರು, ಗೃಹಿಣಿಯರು, ಆಟೋ ಚಾಲಕರು, ಬೀದಿ ಬದಿ ವ್ಯಾಪರಿಗಳು, ಖಾಸಗಿ ಕಂಪನಿಗಳ ನೌಕರರೊಂದಿಗೆ ಮುಖಾಮುಖಿಯಾಗಿ ಸಂವಾದ ನಡೆಸುತ್ತಿದ್ದಾರೆ. ಅಲ್ಲದೆ, ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ವಿವಿಧ ಕ್ಷೇತ್ರದಲ್ಲಿನ ಸಾಧಕರೊಂದಿಗೆ ಕ್ಷೇತ್ರದ ಅಭಿವೃದ್ಧಿ ಕುರಿತು ಸಭೆಗಳನ್ನು ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವಿನೂತನವಾಗಿ ಪ್ರಚಾರ ನಡೆಸುತ್ತಿರುವುದರಿಂದ ಈ ಬಾರಿ ಬಿಜೆಪಿ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಕಾರ್ಯಕರ್ತರು ವಿಶ್ವಾಸರ ವ್ಯಕ್ತಪಡಿಸಿದ್ದಾರೆ.

    ಉತ್ತರ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಮಾಡಬೇಕೆನ್ನುವುದು ನನ್ನ ಕನಸಾಗಿದೆ. ಆ ನಿಟ್ಟಿನಲ್ಲಿ ದಿನದ 24 ಕುಡಿಯುವ ನೀರು, ಗುಣಮಟ್ಟದ ರಸ್ತೆ, ಬೀದಿ ದೀಪ ಅಳವಡಿಕೆ, ಸಾರಿಗೆ ಬಸ್ ಸೌಲಭ್ಯ, ಶಿಕ್ಷಣ, ಆರೋಗ್ಯ ಸೌಲಭ್ಯ ಕಲ್ಪಿಸಲು ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತಿದೆ.
    | ಡಾ.ರವಿ ಪಾಟೀಲ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts