More

    ಡಾ.ರವಿ ಪಾಟೀಲ ರೋಡ್ ಶೋಗೆ ಬೆಂಬಲ

    ಬೆಳಗಾವಿ: ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಪರವಾಗಿ ಶಾಸಕ ಅನಿಲ ಬೆನಕೆ, ಪಾಲಿಕೆ ಸದಸ್ಯರು, ನೂರಾರು ಕಾರ್ಯಕರ್ತರು ಭರ್ಜರಿ ರೋಡ್ ಶೋ ನಡೆಸಿ ಮತಯಾಚಿಸಿದರು.

    ನಗರದ ಚನ್ನಮ್ಮ ವೃತ್ತದಲ್ಲಿ ಸಂಜೆ 5.30ಕ್ಕೆ ಆರಂಭವಾದ ರೋಡ್ ಶೋ ಗಣಪತಿ ಗಲ್ಲಿ ಮಾರ್ಗವಾಗಿ ಮಾರುಕಟ್ಟೆ ಪ್ರದೇಶಗಳಲ್ಲಿ ಸಂಚಾರ ನಡೆಸಿ ಹುತಾತ್ಮ ಚೌಕ್‌ನಲ್ಲಿ ಸಮಾಪ್ತಿಗೊಂಡಿತು. ರಸ್ತೆಯ ಎರಡು ಬದಿಯಲ್ಲಿ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಹೂ ಎರಚುತ್ತ ಜೈ ಶಿವಾಜಿ, ಜೈ ಮೋದಿ ಎನ್ನುತ್ತ ನಾಯಕರನ್ನು ಬರಮಾಡಿಕೊಂಡರು. ಮಹಿಳಾ ಕಾರ್ಯಕರ್ತರು ಆರತಿ ಮಾಡಿ ಮೆರವಣಿಗೆಗೆ ಸ್ವಾಗತ ಕೋರುತ್ತಿರುವುದು ವಿಶೇಷವಾಗಿತ್ತು.

    ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅನುದಾನದಲ್ಲಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು, ಜನಪ್ರಿಯ ಯೋಜನೆಗಳನ್ನು ಹಾಗೂ ಮುಂದಿನ ಐದು ವರ್ಷದಲ್ಲಿ ಕೈಗೊಳ್ಳುವ ವಿವಿಧ ಕಾಮಗಾರಿಗಳು, ಯೋಜನೆಗಳ ಕುರಿತು ಪಕ್ಷದ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೆ, ಪಕ್ಷದ ಸ್ಥಳೀಯ ಮುಖಂಡರು ವ್ಯಾಪಾರಿಗಳ ಬಳಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಿನಲ್ಲಿ ಮತಯಾಚನೆ ಮಾಡಿದರು.

    ಅಭ್ಯರ್ಥಿ ಡಾ.ರವಿ ಪಾಟೀಲ ಮಾತನಾಡಿ, ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಾಕಿ ಉಳಿದುಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು. ವ್ಯಾಪಾರಿಗಳ ಬಹುದಿನ ಬೇಡಿಕೆಗಳಾದ ಪಾರ್ಕಿಂಗ್, ಸಂಚಾರ ದಟ್ಟಣೆ ಸಮಸ್ಯೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

    ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರಗಳಿರುವುದರಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ, ಕ್ಷೇತ್ರಕ್ಕೆ ಹೆಚ್ಚುವರಿ ಅನುದಾನ ತರಲಾಗುವುದು. ಹಾಗಾಗಿ, ಕ್ಷೇತ್ರದ ಅಭಿವೃದ್ಧಿ ಹಿತದೃಷ್ಟಿಯಿಂದ ಈ ಬಾರಿ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿ ಬೆಂಬಲಿಸುವಂತೆ ಜನರಿಗೆ ಮನವಿ ಮಾಡಿಕೊಂಡರು. ಸಂಸದೆ ಮಂಗಲ ಅಂಗಡಿ, ಶಾಸಕ ಅನೀಲ ಬೆನಕೆ, ಬಿಜೆಪಿ ರಾಜ್ಯ ವಕ್ತಾರ ಎಂ.ಬಿ.ಝಿರಲಿ, ಮುರುೇಂದ್ರಗೌಡ ಪಾಟೀಲ, ಪಾಲಿಕೆ ಸದಸ್ಯರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts