More

    ಶಂಕರಗೌಡಗೆ ಕೇಂದ್ರ ಗೃಹ ಸಚಿವರ ಪದಕ

    ಲಕ್ಷೆ್ಮೕಶ್ವರ: ತಾಲೂಕಿನ ರಾಮಗೇರಿ ಗ್ರಾಮದವರಾದ ಸಿಐಡಿ ಡಿವೈಎಸ್​ಪಿ ಶಂಕರಗೌಡ ವೀರನಗೌಡ ಪಾಟೀಲ ಅವರು ಕೇಂದ್ರ ಗೃಹ ಸಚಿವರ ಪದಕಕ್ಕೆ ಭಾಜನರಾಗಿದ್ದಾರೆ.

    ರಾಜ್ಯದ ಆರು ಪೊಲೀಸ್ ಅಧಿಕಾರಿಗಳು ಈ ಪದಕಕ್ಕೆ ಭಾಜನರಾಗಿದ್ದು ಈ ಪೈಕಿ ವೈಜ್ಞಾನಿಕ ಹಾಗೂ ಕ್ಷಿಪ್ರ ತನಿಖೆ ನಡೆಸಿದ ಡಿವೈಎಸ್ಪಿ ಶಂಕರಗೌಡ ವೀರನಗೌಡ ಪಾಟೀಲ ಅವರು ಕೂಡ ಒಬ್ಬರಾಗಿದ್ದಾರೆ. ಪಿಎಸ್​ಐ ನೇಮಕಾತಿ ಅಕ್ರಮದ ತನಿಖಾಧಿಕಾರಿಯೂ ಆಗಿರುವ ಶಂಕರಗೌಡ 2019ರಲ್ಲಿ ಸೇಡಂ ವೃತ್ತದ ಸಿಪಿಐ ಆಗಿದ್ದಾಗ ಚಿಂಚೋಳಿ ತಾಲೂಕಿನ ಯಾಕಾಪುರದಲ್ಲಿ ನಡೆದಿದ್ದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ರ್ತಾಕ ಅಂತ್ಯ ನೀಡಿದ್ದರು. ಎಫ್​ಐಆರ್ ದಾಖಲಾದ 101 ದಿನಗಳಲ್ಲಿಯೇ ಆರೋಪಿ ಯಲ್ಲಪ್ಪ ಎಂಬಾತನಿಗೆ ಗಲ್ಲು ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಪೂರಕ ದಾಖಲೆಗಳನ್ನು ಸಂಗ್ರಹಿಸಿ ದೋಷಾರೂಪ ಪಟ್ಟಿ ಸಲ್ಲಿಸಿದ್ದರು. ಇದನ್ನು ಆಧರಿಸಿ ಶಂಕರರಗೌಡ ಅವರಿಗೆ ಕೇಂದ್ರ ಸರ್ಕಾರದ ಈ ಪದಕ ನೀಡಲಾಗಿದೆ.

    ರಾಜ್ಯದಲ್ಲಿ ನಡೆದ ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಕಿಂಗ್​ಪಿನ್ ಆರ್.ಡಿ. ಪಾಟೀಲ, ಮಹಾಂತೇಶ ಪಾಟೀಲ, ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ ಸೇರಿದಂತೆ ಇತರ ಆರೋಪಿಗಳನ್ನು ಬಂಧಿಸಿದ ಸಿಐಡಿ ತಂಡದಲ್ಲಿ ಶಂಕರಗೌಡ ಪಾಟೀಲ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts