More

    ಡಿಸಿಸಿ ಬ್ಯಾಂಕ್‌ನಲ್ಲಿ ಶೀಘ್ರವೇ ಆನ್‌ಲೈನ್ ಸೇವೆ

    ಗೌರಿಬಿದನೂರು : ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಶೀಘ್ರವೇ ಆನ್‌ಲೈನ್ ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದು ಬ್ಯಾಂಕ್ ಅಧ್ಯಕ್ಷ ಗೋವಿಂದಗೌಡ ತಿಳಿಸಿದ್ದಾರೆ.

    ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್‌ನಿಂದ ತಾಲೂಕಿನ 35 ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಕಂಪ್ಯೂಟರ್ ವಿತರಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಇತರ ಜಿಲ್ಲಾ ಸಹಕಾರಿ ಬ್ಯಾಂಕ್‌ಗಳ ಪೈಕಿ ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಸಿ ಬ್ಯಾಂಕ್ ಈಗಾಗಲೆ ಗ್ರಾಹಕರಿಗೆ ಆನ್‌ಲೈನ್ ಸೇವೆಗಳನ್ನು ಒದಗಿಸುತ್ತಿದೆ. ಇದರ ಬೆನ್ನಲ್ಲೇ ನಾವು ಸಹ ಆನ್‌ಲೈನ್ ಸೇವೆಗಳನ್ನು ಒದಗಿಸಲು ಮುಂದಾಗುತ್ತಿದೆ ಎಂಬ ಮಾಹಿತಿ ನೀಡಿದರು.

    ಗ್ರಾಮೀಣ ಪ್ರದೇಶದ ವ್ಯವಸಾಯ ಸೇವಾ ಸಹಕಾರ ಸಂಘಗಳು ಕೂಡ ಆಧುನಿಕ ಸ್ಪರ್ಶ ಪಡೆದುಕೊಳ್ಳಲಿವೆ. ಸ್ತ್ರೀಶಕ್ತಿ ಸಂಘಗಳು ಪಡೆಯುವ ಸಾಲದ ಹಣ ಆಯಾ ಸಂಘಗಳ ಖಾತೆಯಲ್ಲಿ ಜಮೆ ಆಗಿಲಿದ್ದು, ಅವಶ್ಯಕತೆ ಇದ್ದಾಗ ಆ ಹಣ ಪಡೆದುಕೊಳ್ಳಬಹುದು ಹಾಗೂ ಅದೇ ಖಾತೆಗೆ ಮರುಜಮೆ ಮಾಡಬಹುದು ಎನ್ನುವ ಮೂಲಕ ಗ್ರಾಹಕಸ್ನೇಹಿ ಕ್ರಮಗಳ ಕುರಿತು ವಿವರಿಸಿದರು.

    ಹೊಸ ಸೇವಾ ಸಹಕಾರ ಸಂಘಗಳು ಆರ್ಥಿಕವಾಗಿ ಸದೃಢರಾಗಬೇಕು. ಈ ನಿಟ್ಟಿನಲ್ಲಿ ರಸಗೊಬ್ಬರ ಮಾರಾಟ, ಕೃಷಿ ಯಂತ್ರಗಳನ್ನು ರೈತರಿಗೆ ಒದಗಿಸುವ ಕೆಲಸ ಮಾಡಬೇಕು ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.
    ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಮರಳೂರು ಹನುಮಂತರೆಡ್ಡಿ, ವೇದಾ ಮಾತನಾಡಿದರು, ವ್ಯವಸ್ಥಾಪಕ ಮಹಮದ್ ಅಸ್ಲಂ ಚಂದನದೂರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ, ಹಾಗೂ ಜಿಪಂ ಮಾಜಿ ಅಧ್ಯಕ್ಷ ಸಿ.ಆರ್. ನರಸಿಂಹಮೂರ್ತಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts