More

    ಡಿಸಿ ಕಚೇರಿ ಎದುರು ಎಸ್​ಎಫ್​ಐ ಪ್ರತಿಭಟನೆ

    ಹಾವೇರಿ: ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪದವಿ ಪ್ರವೇಶ ಅನುಮತಿ ನಿರಾಕರಣೆ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್​ಎಫ್​ಐ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ರಾಜ್ಯದಲ್ಲಿರುವ ವಿಶ್ವ ವಿದ್ಯಾಲಯ ಗಳಲ್ಲಿ ಐಟಿಐ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ಪಿಯುಸಿ ತತ್ಸಮ ಎಂದು ಪದವಿಗೆ ದಾಖಲಾತಿ ಕೊಟ್ಟಿದ್ದಾರೆ. ಆದರೆ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಮಾತ್ರ ಐಟಿಐ ಮತ್ತು ಡಿಪ್ಲೊಮಾ ಮುಗಿಸಿದ ವಿದ್ಯಾರ್ಥಿಗಳ ದಾಖಲಾತಿಗೆ ಅನುಮತಿ ನೀಡದಿರುವುದು ಸರಿಯಲ್ಲ. ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳನ್ನು ಪಿಯುಸಿಗೆ ತತ್ಸಮ ಎಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

    ಅನೇಕ ವಿದ್ಯಾರ್ಥಿಗಳು 10ನೇ ತರಗತಿ ಮುಗಿದ ನಂತರ ತಮ್ಮ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಐಟಿಐ ಮತ್ತು ಡಿಪ್ಲೊಮಾಕ್ಕೆ ಪ್ರವೇಶ ಪಡೆದು ಕೋರ್ಸ್ ಮುಗಿಸಿದ್ದಾರೆ. ಆದರೆ, ಅವರಿಗೆ ಸದ್ಯ ಉದ್ಯೋಗ ಸಿಗುತ್ತಿಲ್ಲ. ಇದರಿಂದಾಗಿ ಉನ್ನತ ಶಿಕ್ಷಣದ ಕಡೆ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಆದರೆ, ಕರ್ನಾಟಕ ವಿಶ್ವವಿದ್ಯಾಲಯದ ಆದೇಶದಿಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಮೊಟಕುಗೊಳ್ಳುತ್ತಿದ್ದು, ಪುನಃ ಅವರು ಪಿಯುಸಿ ಮುಗಿಸಿ ಪದವಿ ಪಡೆಯಬೇಕಾದ ಸ್ಥಿತಿ ನಿರ್ವಣವಾಗಿದೆ. ಇದರಿಂದ 2ವರ್ಷಗಳ ಕಾಲ ವಿದ್ಯಾರ್ಥಿ ಜೀವನ ಹಾಳಾಗುತ್ತದೆ. ಈಗಾಗಲೇ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಅಕ್ಕಮಹಾದೇವಿ ವಿಶ್ವವಿದ್ಯಾಲಯ ಹಾಗೂ ಕಲಬುರ್ಗಿ ವಿಶ್ವವಿದ್ಯಾಲಯ ಸೇರಿ ಅನೇಕ ವಿಶ್ವವಿದ್ಯಾಲಯಗಳು ಐಟಿಐ ಮತ್ತು ಡಿಪ್ಲೊಮಾ ಮುಗಿಸಿದ ವಿದ್ಯಾರ್ಥಿಗಳನ್ನು ಪಿಯುಸಿಗೆ ತತ್ಸಮ ಎಂದು ಪರಿಗಣಿಸಿ ಪದವಿ ದಾಖಲಾತಿಗೆ ಅನುಮತಿ ನೀಡಿವೆ. ಆದ್ದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಕವಿವಿ ಕುಲಪತಿಗೆ ಮನವಿ ಸಲ್ಲಿಸಿದರು. ಬಸವರಾಜ ಭೋವಿ, ಬಸವರಾಜ ದೊಡ್ಡಮನಿ, ಪ್ರಸನ್ನ ಕಡಕೋಳ, ಶ್ರೀನಿವಾಸ ದೊಡ್ಡಮನಿ, ನಿಂಗಪ್ಪ ದೊಡ್ಡಮನಿ, ನಾಗರಾಜ ಎಸ್, ಕಿರಣ ನಾಯಕ, ಪವನ್ ಎಸ್.ಎಚ್., ಸಚಿನ, ಅಜಯ ಹಟ್ಟಿ, ನಿರಂಜನ ಬಿದರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts