More

    ಡಿಸಿ ಕಚೇರಿ ಎದುರು ಗಂಟೆ ಬಾರಿಸಿ ಪ್ರತಿಭಟನೆ

    ಧಾರವಾಡ: ರೈತರಿಗೆ ಮಾಸಾಶನ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗಂಟೆ ಬಾರಿಸುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿದರು.

    ತೈಲ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಕೃಷಿ ಅವಲಂಬಿತ ಕುಟುಂಬಗಳಿಗೆ ಮಾತ್ರವಲ್ಲದೆ, ವಾಹನ ಚಾಲನೆ ಮಾಡಿ ಹೊಟ್ಟೆ ತುಂಬಿಸಿಕೊಳ್ಳುವವರಿಗೂ ಜೀವನ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ತೈಲ ಬೆಲೆ ಹಾಗೂ ತೆರಿಗೆ ದರದಲ್ಲಿ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.

    60 ವರ್ಷ ಮೇಲ್ಪಟ್ಟ ರೈತರಿಗೆ ತಿಂಗಳಿಗೆ 3000 ರೂ. ಮಾಸಾಶನ, ಕಿಸಾನ ಸಮ್ಮಾನ್ ಯೋಜನೆಯನ್ನು 15000 ರೂ. ಗೆ ಹೆಚ್ಚಿಸುವುದು, ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸುವುದು, ರೈತರ ಸಾಲ ಮನ್ನಾ, ಬ್ಯಾಂಕ್​ಗಳು ಸಾಲ ವಸೂಲಿ ಹೆಸರಿನಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳ ತಡೆಯುವುದು ಸೇರಿ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

    ನಂತರ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿಪತ್ರ ರವಾನಿಸಿದರು. ಸಂಘದ ಜಿಲ್ಲಾಧ್ಯಕ್ಷ ರವಿರಾಜ ಕಂಬಳಿ, ಶೋಭಾ ಚಲವಾದಿ, ನಿಂಗಪ್ಪ ಜ್ಯೋತಿನಾಯ್ಕರ, ನಾಗೇಂದ್ರ ಸೈದಾಪುರ, ನಿಜಗುಣಿ ದೇಸಾಯಿ, ಲಕ್ಷ್ಮಣ ಬಕ್ಕಾಯಿ, ಶಿವಾನಂದ ತುರಮರಿ, ವಿಜಯಲಕ್ಷ್ಮೀ ರಾಠೋಡ, ಮಂಜುನಾಥ ಸುಂಕಣ್ಣವರ, ಎಂ. ಮಹದೇವ, ಲೋಕನಾಥ ಹೆಸೂರ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts