More

    ಡಿ.09ರಂದು ರಾಷ್ಟ್ರೀಯ ಲೋಕ ಅದಾಲತ್


    ಯಾದಗಿರಿ: ನ್ಯಾಯಾಲಯಗಳಲ್ಲಿ ಅನೇಕ ವರ್ಷಗಳಿಂದ ಇತ್ಯರ್ಥವಾಗದೆ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಿ ಜನಸಾಮಾನ್ಯರಿಗೆ ಸಂತೋಷದಿಂದ ಕಳುಹಿಸುವುದೇ ನಮ್ಮ ಧ್ಯೇಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಬಿ.ಜಯಂತ ಕುಮಾರ ಹೇಳಿದರು.

    ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಅತ್ಯರ್ಥಪಡಿಸಿ ಕಕ್ಷಿದಾರರಿಗೆ ಹಣ ಮತ್ತು ಸಮಯದ ಉಳಿತಾಯ ಮಾಡುವ ಮೂಲಕ ಅವರು ನಗುನಗುತ್ತ ಇರುವಂತೆ ಮಾಡುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಡಿ.09 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಿದ್ದು, ಸಾರ್ವಜನಿಕರ ವ್ಯಾಜ್ಯ ಪೂರ್ವ ಹಾಗೂ ಕಡಿಮೆ ಖಚರ್ಿನಲ್ಲಿ ಶೀಘ್ರ ತೀಮರ್ಾನಕ್ಕಾಗಿ ಇರುವ ಇದೊಂದು ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾಮರ್ಿಕ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕನರ್ಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುವುದು ಎಂದರು.

    ನ.18,19 ಮತ್ತು 20 ರಂದು ಉಪ ಲೋಕಾ ಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಜಿಲ್ಲೆಗೆ ಆಗಮಿಸುತ್ತಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಇದರ ಸದುಪಯೋಗ ಪಡೆಯಿರಿ ಎಂದು ಸಲಹೆ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಹೊನೋಲೆ, ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಸಿಎಸ್ ಮಾಲಿ ಪಾಟೀಲ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts