More

    ಡಿ.10ರಂದು ಕಾನ್ಸ್‌ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

    ಚಿತ್ರದುರ್ಗ:ಪೊಲೀಸ್ ಕಾನ್ಸ್‌ಟೇಬಲ್(ಸಿವಿಲ್)454 ಹುದ್ದೆಗಳ ಭರ್ತಿಗಾಗಿ ಡಿ.10ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12.30 ರವರೆಗೆ ನಗರದ ಎಂಟು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
    ಬಾಪೂಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 400 ಅಭ್ಯರ್ಥಿಗಳು, ಬಾಲಕರ ಸರ್ಕಾರಿ ಪಪೂ ಕಾಲೇಜಿನಲ್ಲಿ 400, ಸರ್ಕಾರಿ ಕಲಾ ಕಾಲೇಜಿನಲ್ಲಿ 500, ಎಸ್‌ಜೆಎಂ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ 400, ಎಸ್‌ಆರ್‌ಎಸ್ ಹೆರಿಟೇಜ್ ಶಾಲೆಯಲ್ಲಿ 700, ಸಂತಜೋಸೆಫ್ ಬಾಲಕಿಯರ ಪ್ರೌಢಶಾಲೆಯಲ್ಲಿ 380, ವಾಸವಿ ವಿದ್ಯಾಸಂಸ್ಥೆಯಲ್ಲಿ 540 ಹಾಗೂ ವಿದ್ಯಾವಿಕಾಸ ಆಂಗ್ಲ ಪ್ರೌಢಶಾಲೆಯಲ್ಲಿ 400 ಅಭ್ಯರ್ಥಿಗಳು ಸೇರಿದಂತೆ 37 20 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
    ಅಭ್ಯರ್ಥಿಗಳು ಯಾವುದೇ ಪುಸ್ತಕ, ಚೀಟಿ, ಮೊಬೈಲ್ ಮೊದಲಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೊಠಡಿಗೆ ತೆಗೆದು ಕೊಂಡು ಹೋಗು ವಂತಿಲ್ಲ. ಕರೆಪತ್ರದ ಬಗ್ಗೆ ಅಭ್ಯರ್ಥಿಗಳಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು,ಅದರ ಲಿಂಕ್‌ನ್ನೂ ಕಳಿಸ ಲಾಗುವುದು. ಅಭ್ಯ ರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗ ಬೇಕೆಂದು ಎಸ್‌ಪಿ ಧರ್ಮೇಂದರ್‌ಕುಮಾರ್ ಮೀನಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts