More

    ಡೀಮ್ಡ್ ಅರಣ್ಯ ವ್ಯಾಪ್ತಿಯ ರೈತರಿಗೆ ಸಾಗುವಳಿ ನೀಡಿ

    ಕೆ.ಆರ್.ಪೇಟೆ: ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗುವಳಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿರುವ ರೈತರಿಗೆ ಸರ್ಕಾರ ಅರಣ್ಯ ಕಾಯ್ದೆಗೆ ತಿದ್ದುಪಡಿ ನೆರವಿಗೆ ನಿಲ್ಲುವಂತೆ ಶಾಸಕ ಎಚ್.ಟಿ.ಮಂಜು ಸರ್ಕಾರವನ್ನು ಒತ್ತಾಯಿಸಿದರು.
    ಪ್ರಥಮ ಬಾರಿಗೆ ಶಾಸನ ಸಭೆ ಪ್ರವೇಶಿಸಿರುವ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಬಜೆಟ್ ಮೇಲಿನ ಭಾಷಣದಲ್ಲಿ ಡೀಮ್ಡ್ ಅರಣ್ಯ ಪ್ರದೇಶದ ರೈತರ ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆದರು.
    ಡೀಮ್ಡ್ ಅರಣ್ಯ ಪ್ರದೇಶದಲ್ಲಿ ರೈತರು ಸಾಗುವಳಿ ಮಾಡುತ್ತಿದ್ದಾರೆ. ಸಚಿವರಾಗಿದ್ದ ಕಾಗೂಡು ತಿಮ್ಮಪ್ಪ ರೈತರ ಸಮಸ್ಯೆಗಳನ್ನು ಅರಿತು ಸಮಸ್ಯೆಯ ಪರಿಹಾರಕ್ಕೆ ಜಿಲ್ಲಾ ಸಮಿತಿಗಳನ್ನು ರಚಿಸಿದ್ದರು. ಬಹುತೇಕ ಜಿಲ್ಲೆಗಳಲ್ಲಿ ಜಿಲ್ಲಾ ಸಮಿತಿಗಳು ನೈಜ ವರದಿ ನೀಡಿವೆ. ಆದರೆ ಕೆಲವು ಜಿಲ್ಲೆಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೆ ಕೇವಲ ಆರ್.ಟಿ.ಸಿ. ಆಧರಿಸಿ ವರದಿ ನೀಡಿದ್ದಾರೆ. ಇದರಿಂದ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತಿರುವ ರೈತರು ಸಮಸ್ಯೆಗೆ ಸಿಲುಕಿದ್ದಾರೆ. ಕೆ.ಆರ್.ಪೇಟೆ ತಾಲೂಕಿನಲ್ಲಿ 17 ಸಾವಿರ ಹೆಕ್ಟೇರ್ ಪ್ರದೆಶದಲ್ಲಿ ರೈತರು ತಲೆತಲಾಂತರದಿಂದ ಸಾಗುವಳಿ ಮಾಡುತ್ತಿದ್ದಾರೆ. ಆದರೆ ಅವರಿಗೆ ಸಾಗುವಳಿ ಚೀಟಿ ನೀಡಿ ಖಾತೆ, ದುರಸ್ಥು ಮಾಡಿಕೊಟ್ಟಿಲ್ಲ. ವಸತಿ ಪ್ರದೇಶಕ್ಕೆ ಅಡಚಣೆಯಾಗದಂತೆ ಅರಣ್ಯ ಕಾಯ್ದೆಗೆ ತಿದ್ದುಪಡಿ ತರುವ ಮಾತನ್ನು ಸರ್ಕಾರ ಹೇಳುತ್ತಿದೆ ಎಂದು ತಿಳಿಸಿದರು.

    ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ, ಯರಗನಹಳ್ಳಿ, ತಿಮ್ಮಪ್ಪ ಗುಡ್ಡದಲ್ಲಿ ವಾಸಿಸುತ್ತಿರುವ ಜನ ಅರಣ್ಯ ಇಲಾಖೆಯಿಂದ ಕಿರುಕುಳ ಅನುಭವಿಸುತ್ತಿದ್ದಾರೆ. ಕೃಷ್ಣರಾಜ ಸಾಗರದಲ್ಲಿನ ಮುಳುಗಡೆ ಪ್ರದೇಶದ ಜನ ಯರಗನಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ. ಇವರು ವಾಸಿಸುತ್ತಿರುವ ಜಾಗ ಡೀಮ್ಡ್ ಅರಣ್ಯ ಪ್ರದೇಶದಲ್ಲಿದೆ ಎನ್ನುವ ಕಾರಣಕ್ಕೆ ಈ ಜನರಿಗೆ ಗ್ರಾಮ ಪಂಚಾಯತಿ ವತಿಯಿಂದ ಯಾವುದೇ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿಲ್ಲ. ಅರಣ್ಯ ಇಲಾಖೆಯ ಅಡಚಣೆಯಿಂದ ಇಲ್ಲಿ ವಿದ್ಯುತ್ ಸೌಲಭ್ಯವನ್ನೂ ಕಲ್ಪಿಸಲಾಗಿಲ್ಲ. ಕತ್ತಲೆಯಲ್ಲಿ ಹಾವು ಕಡಿದು ಈಗಾಗಲೇ 2-3 ಜನ ಸತ್ತಿದ್ದಾರೆ. ರಾಜ್ಯ ಸರ್ಕಾರ ಅರಣ್ಯ ಭೂಮಿಯನ್ನು ರೈತರಿಗೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳುತ್ತಿದೆ. ಇದರಿಂದ ಸುಮಾರು 70-80 ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತ ಕುಟುಂಬಗಳು ಸಮಸ್ಯೆಗೆ ಸಿಲುಕಲಿವೆ. ಆದ ಕಾರಣ ರಾಜ್ಯ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದು ಉಳುಮೆ ಮಡುತ್ತಿರುವ ರೈತರಿಗೆ ಜಮೀನಿನ ಮಾಲಿಕತ್ವ ನೀಡುವಂತೆ ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts