More

    ತಂತ್ರಜ್ಞಾನ ಅಳವಡಿಕೆಯಿಂದ ಹಣ್ಣಿನ ಉತ್ಪಾದನೆ ಹೆಚ್ಚಳ

    ಬೆಳಗಾವಿ: ಹಣ್ಣು ಉತ್ಪಾದನೆಗೆ ವಿಪುಲ ಅವಕಾಶವಿದ್ದು, ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನ ಅವಶ್ಯಕತೆ ಇದೆ ಎಂದು ತೋಟಗಾರಿಕೆ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಹಾಂತೇಶ ಮುರಗೋಡ ಹೇಳಿದ್ದಾರೆ.

    ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಹಣ್ಣಿನ ಬೆಳೆಗಳ ಆಕಾರ ನಿರ್ವಹಣೆ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾವಿನ ಉತ್ಪಾದನೆ ಕುಸಿಯುತ್ತಿದೆ. ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಒಂದು ಹೆಕ್ಟೇರ್‌ಗೆ 5,000 ರೂ. ಗಳನ್ನು ತೋಟಗಾರಿಕೆ ಇಲಾಖೆಯಿಂದ ಸಹಾಯಧನದ ರೂಪದಲ್ಲಿ ನೀಡಲಾಗುತ್ತಿದೆ. ಅದೇ ರೀತಿ ಜಾಂಬೋಟಿಯಲ್ಲಿ ಸರ್ಕಾರ 2.5 ಕೋಟಿ ರೂ. ವೆಚ್ಚದಲ್ಲಿ ಜೇನುತುಪ್ಪ ಸಂಸ್ಕರಣಾ ಕೇಂದ್ರ ಸ್ಥಾಪಿಸಲು ಅನುಮತಿ ನೀಡಿದೆ ಎಂದರು. ಕೇಂದ್ರದ ಹಿರಿಯ ವಿಜ್ಞಾನಿ ಶ್ರೀದೇವಿ ಬಿ. ಅಂಗಡಿ ಮಾತನಾಡಿ, ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿವಿಧ ಹಣ್ಣಿನ ಬೆಳೆಗಳ ಪ್ರಾತ್ಯಕ್ಷಿಕೆ ಜರುಗಿಸಲಾಗಿದೆ ಎಂದರು. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಿರಣಕುಮಾರ ಉಪಾಳೆ, ಕೃಷಿ ವಿಜ್ಞಾನ ಕೇಂದ್ರದ ಚೇರ್ಮನ್ ಬಿ.ಆರ್. ಪಾಟೀಲ, ತೋಟಗಾರಿಕೆ ವಿಜ್ಞಾನಿ ಪ್ರವೀಣ ಯಡಹಳ್ಳಿ, ಎಸ್.ಎಂ.ವಾರದ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts