More

    ತಂಬಾಕು ಮುಕ್ತವಾಗಿಸಲು ಶ್ರಮಿಸಿ

    ಬೆಳಗಾವಿ: ವಿಶ್ವವಿದ್ಯಾನಿಲಯಗಳನ್ನು ಸಂಪೂರ್ಣವಾಗಿ ತಂಬಾಕು ಮುಕ್ತವನ್ನಾಗಿಸುವ ಜವಾಬ್ದಾರಿ ಹೊಂದಿದ್ದೇವೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಎಂ.ಹನುಮಂತಪ್ಪ ತಿಳಿಸಿದರು. ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಂಬಾಕು ಮುಕ್ತ ವಿಶ್ವವಿದ್ಯಾಲಯ ಘೋಷಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಸಮೀಕ್ಷ ಣಾಧಿಕಾರಿಗಳು ಹಾಗೂ ತಂಬಾಕು ನಿಯಂತ್ರಣಾಧಿಕಾರಿ ಡಾ.ಬಿ.ಎನ್ ತುಕ್ಕಾರ ಮಾತನಾಡಿ, ತಂಬಾಕು ಸೇವನೆಯಿಂದಾಗುವ ಪ್ರತ್ಯಕ್ಷ ಹಾಗೂ ಪರೋಕ್ಷ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

    ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ನಂದಿನಿ ದೇವರಮನಿ ಮಾತನಾಡಿ,ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದ ಶರೀರದ ಮೇಲೆ ಅನೇಕ ದುಷ್ಪರಿಣಾಮ ಉಂಟಾಗುತ್ತವೆ ಎಂದರು. ಪ್ರೊ. ಶಿವಾನಂದ ಗೊರನಾಳೆ ಕುಲಸಚಿವರು (ಮೌಲ್ಯಮಾಪನ) ರಾಣಿಚನ್ನಮ್ಮ ವಿಶ್ವವಿದ್ಯಾನಿಲಯದ ಡಾ. ಪಿ. ನಾಗರಾಜ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts