More

    ತನಿಖೆಗೆ ಆಗ್ರಹಿಸಿ ಪ್ರತಿಭಟನೆ

    ಧಾರವಾಡ : ಕೋವಿಡ್-19 ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದ್ದು, ಅದರ ಖರ್ಚು ವೆಚ್ಚಗಳ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

    ಉಪಕರಣ ಖರೀದಿ ಮಾಡುವ ಸಂದರ್ಭದಲ್ಲಿ ಸರ್ಕಾರ ಮಾರುಕಟ್ಟೆ ಬೆಲೆಗಿಂತ ನಾಲ್ಕು ಪಟ್ಟು ಹೆಚ್ಚಿಗೆ ದರದ ಲೆಕ್ಕ ನೀಡಿ ಜನರ ಹಣ ಲೂಟಿ ಮಾಡಿದೆ. ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಖರೀದಿಸಿದ ವೈದ್ಯಕೀಯ ಸಲಕರಣೆಗಳೂ ಕಳಪೆ ಮಟ್ಟದ್ದಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ಭ್ರಷ್ಟಾಚಾರದ ಬಗ್ಗೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಇದಲ್ಲದೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಹಾಗೂ ವ್ಯದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

    ನಂತರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಪತ್ರ ರವಾನಿಸಿದರು. ಉಳವಯ್ಯ ಚಿಕೊಪ್ಪ, ಜಿ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಸತೀಶ ತುರಮರಿ, ನಾಗರಾಜ ಗೌರಿ, ಬಸವರಾಜ ಜಾಧವ, ಆನಂದ ಸಿಂಗನಾಥ, ಯಾಸೀನ್ ಹಾವೇರಿಪೇಟ, ಮಂಜುನಾಥ ಕಾಮಕರ, ರಮೇಶ ತಳಗೇರಿ, ಪ್ರಕಾಶ ಘಾಟಗೆ, ಬಸವರಾಜ ಮಟ್ಟಿ, ನಿಂಗಪ್ಪ ಘಾಟೀನ, ಗೌರಮ್ಮ ನಾಡಗೌಡ್ರ, ಸಂಗಿತಾ ಪೂಜಾರ, ಪ್ರಶಾಂತ ಕೇಕರೆ, ಅಶೋಕ ದೊಡ್ಡಮನಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts