More

    ತಂಪಾಗಿ ಬೀಸುತ್ತಿರುವ ಕಾಂಗ್ರೆಸ್ ಅಲೆ

    ಸೋಮವಾರಪೇಟೆ: ಬಿಜೆಪಿ ಅಲೆ ಮಾಯವಾಗಿದೆ, ಕೊಡಗಿನಲ್ಲಿ ಕಾಂಗ್ರೆಸ್ ಅಲೆ ತಂಪಾಗಿ ಬೀಸುತ್ತಿದೆ ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಪಟ್ಟರು.

    ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೊಡವ ಸಮಾಜದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕರ್ತರ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಭರವಸೆಗೆ ಕಳೆದ ವಿಧಾನಸಭೆಯಲ್ಲಿ ಜನರು ಕಾಂಗ್ರೆಸ್‌ಗೆ ಮತ ನೀಡಿ ಭರ್ಜರಿ ಜಯ ತಂದುಕೊಟ್ಟರು. ಕೇವಲ 9 ತಿಂಗಳಲ್ಲೇ 5 ಗ್ಯಾರಂಟಿಗಳನ್ನು ನೀಡುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಮತದಾರರು ಕಾಂಗ್ರೆಸ್ ಪಕ್ಷದ ಆಡಳಿತವನ್ನು ಮನಸಾರೆ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

    ಪಕ್ಷದ ಹಿರಿಯ ಸದಸ್ಯರು ಹೆಚ್ಚಿನ ಜವಾಬ್ದಾರಿಯಿಂದ ಬೂತ್ ಮಟ್ಟದಲ್ಲಿ ಕೆಲಸ ಮಾಡಿದಲ್ಲಿ ಹೆಚ್ಚಿನ ಮತಗಳನ್ನು ಪಡೆಯಲು ಸಾಧ್ಯ. ದೇಶದಲ್ಲಿ ಬಿಜೆಪಿ ವಿರೋಧಿ ಅಲೆ ರಭಸದಿಂದ ಬೀಸುತ್ತಿದೆ. ಸುಳ್ಳು ಹೇಳುವವರು ಕೊಚ್ಚಿ ಹೋಗಲಿದ್ದಾರೆ. ಕೇಂದ್ರದಲ್ಲಿ ಇಂಡಿಯ ಅಧಿಕಾರಕ್ಕೆ ಬಂದರೆ ದೇಶದ ಜನತೆ ನೆಮ್ಮದಿಯಿಂದ, ಶಾಂತಿಯಿಂದ ಬದುಕಬಹುದು ಎಂದು ಹೇಳಿದರು.

    ಹಿಂದಿನ ಸಂಸದರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಸದಸ್ಯರೇ ಅವರಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡಿದರು. ಅರಮನೆಗೆ ತೆರಳಿ ಜನರ ಕಷ್ಟಗಳನ್ನು ಹೇಳಿಕೊಳ್ಳುವ ಕೆಲಸ ಬೇಡ, ನಮ್ಮ ಕೈಗೆಟುಕುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳೋಣ ಎಂದು ಹೇಳಿದರು.
    ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕಾದರೆ ಕಾಂಗ್ರೆಸ್ ದೇಶದ ಚುಕ್ಕಾಣಿ ಹಿಡಿಯಬೇಕು ಎಂದು ಅಭಿಪ್ರಾಯಿಸಿದರು.

    ಕಳೆದ ಹತ್ತು ವರ್ಷಗಳಿಂದ ನರೇಂದ್ರ ಮೋದಿ ನೇತೃತ್ವದಲ್ಲಿ ಆಡಳಿತ ನಡೆಸಿದ್ದು, ನೆಹರು ಕಾಲದಿಂದ ಕಟ್ಟಿದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದಾರೆ. ಇಸ್ರೋ, ಐಐಟಿ, ಐಐಎಂ ಮಾತ್ರ ಮಾರಾಟಕ್ಕೆ ಉಳಿದಿದೆ ಎಂದರು.

    ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ದೇಶದ ಸಂವಿಧಾನ ಉಳಿವಿಗಾಗಿ ಈ ಬಾರಿಯ ಲೋಕಸಭಾ ಚುನಾವಣೆ ನಡೆಯುತ್ತಿದೆ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಬಾರದು ಎಂದು ಹೇಳಿದರು.

    ದೇಶದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕಿ, ಚುನಾವಣೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರನ್ನು ಟೀಕೆ ಮಾಡುವವರನ್ನು ರಾಜಕೀಯವಾಗಿ ಮುಗಿಸುವ ತಂತ್ರ ಮಾಡಿದ್ದಾರೆ. ಸರ್ವಾಧಿಕಾರವನ್ನು ದೇಶದಿಂದ ಕಿತ್ತೊಗೆಯುವ ಸಂಕಲ್ಪವನ್ನು ಮತದಾರರು ಮಾಡಬೇಕು ಎಂದರು.

    ಕಾಂಗ್ರೆಸ್‌ಗೆ ಕಾರ್ಯಕರ್ತರೇ ಹೃದಯಯಿದ್ದಂತೆ. ಬಿಜೆಪಿ ಭ್ರಷ್ಟ ಆಡಳಿತದಿಂದ ಜನರು ಸಂಕಷ್ಟದಲ್ಲಿದ್ದ ಸಂದರ್ಭ, ಕಾಂಗ್ರೆಸ್ ಕೊಟ್ಟ 5 ಗ್ಯಾರಂಟಿಗಳಿಂದ ಹೆಚ್ಚಿನ ಕುಟುಂಬಗಳು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 25 ಗ್ಯಾರಂಟಿಗಳಿವೆ. ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಆಗಲಿದೆ. ಬಡ ಮಹಿಳೆಯರ ಕುಟುಂಬಕ್ಕೆ ವಾರ್ಷಿಕ 1 ಲಕ್ಷ ರೂ. ಸಹಾಯಧನ ಸೇರಿದಂತೆ ಎಲ್ಲ ಗ್ಯಾರಂಟಿಗಳು ಜನರಿಗೆ ಸಿಗಲಿವೆ ಎಂದರು.

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಸದಸ್ಯ ಕೆ.ಎ.ಯಾಕೂಬ್, ಮಡಿಕೇರಿ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ನಟೇಶ್‌ಗೌಡ ಮಾತನಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts