More

    ತಪಾಸಣೆ ಕೇಂದ್ರಕ್ಕೆ ಸಚಿವರ ಭೇಟಿ

    ಧಾರವಾಡ: ಕರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ವಲಸೆ ಕಾರ್ವಿುಕರು ಹಾಗೂ ಯಾತ್ರಿಕರು ಜಿಲ್ಲೆಗೆ ಆಗಮಿಸುವ ಮುನ್ನ ಆರೋಗ್ಯ ತಪಾಸಣೆಗಾಗಿ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಜಿಲ್ಲಾಡಳಿತ ಸ್ಥಾಪಿಸಿರುವ ವಲಸೆ ಕಾರ್ವಿುಕರ ತಪಾಸಣೆ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ವಲಸೆ ಕಾರ್ವಿುಕರ ವಿವರಗಳ ದಾಖಲಾತಿ ಮಾಹಿತಿ ಪಡೆದ ಸಚಿವರು, ವಲಸೆ ಕಾರ್ವಿುಕರಿಗೆ ಕಲ್ಪಿಸಿರುವ ಆಸನ, ಕುಡಿಯುವ ನೀರು, ಆರೋಗ್ಯ ತಪಾಸಣೆ ಸೌಕರ್ಯ ಪರಿಶೀಲಿಸಿದರು. ಬಳಿಕ ಮೂಗು ಮತ್ತು ಗಂಟಲ ದ್ರವದ ಸಂಗ್ರಹಣೆ ಬೂತ್​ಗೆ ಭೇಟಿ ನೀಡಿ ಕರ್ತವ್ಯ ನಿರತ ಆರೋಗ್ಯ ಸಿಬ್ಬಂದಿಯಿಂದ ಮಾಹಿತಿ ಪಡೆದ ಅವರು, ದಿನದ 24 ಗಂಟೆ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಆಯುಷ್ ವೈದ್ಯರು, ಪೊಲೀಸ್, ಪೌರ ಕಾರ್ವಿುಕರ ಕರ್ತವ್ಯವನ್ನು ಶ್ಲಾಘಿಸಿದರು.

    ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಅಂತಾರಾಜ್ಯ ಹಾಗೂ ಇತರ ಜಿಲ್ಲೆಗಳಿಂದ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಕೃವಿವಿ ಮತ್ತು ರಾಷ್ಟ್ರೀಯ ಹೆದ್ದಾರಿ ಪಕ್ಕದ ಹುಬ್ಬಳ್ಳಿ ತಾಲೂಕಿನ ಪಾಲಿಕೊಪ್ಪ ಆಗಮನ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ ಪ್ರಯಾಣದ ಮಾಹಿತಿ ದಾಖಲಿಸಲಾಗುತ್ತದೆ. ನಂತರ ಅವರ ಮೂಗು ಮತ್ತು ಗಂಟಲ ದ್ರವ ಸಂಗ್ರಹಿಸಿ ಆರೋಗ್ಯ ತಪಾಸಣೆ ಮಾಡಿ ಕ್ವಾರಂಟೈನ್​ಗೆ ಒಳಪಡಿಸಲಾಗುತ್ತದೆ ಎಂದರು.

    ಶಾಸಕ ಅರವಿಂದ ಬೆಲ್ಲದ, ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಪಂ ಸಿಇಒ ಡಾ. ಬಿ.ಸಿ. ಸತೀಶ, ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ, ಡಿಸಿಪಿ ಕೃಷ್ಣಕಾಂತ, ಡಿವೈಎಸ್​ಪಿ ರವಿ ನಾಯಕ, ಎಸಿಪಿ ಅನುಷಾ ಜಿ., ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ ಮದೀನಕರ, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ತಹಸೀಲ್ದಾರ್ ಸಂತೋಷ ಬಿರಾದಾರ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts