More

    ತಪ್ಪದೇ ಮತ ಚಲಾಯಿಸಿ, ಮತದಾನ ಪ್ರಮಾಣ ಹೆಚ್ಚಿಸಿ

    ಬಳ್ಳಾರಿ : ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರಿಕರು ಮತ ಚಲಾವಣೆ ಮಾಡಿದರೆ, ಜಿಲ್ಲೆಯ ಶೇಕಡವಾರು ಮತದಾನ ಪ್ರಮಾಣವೂ ಹೆಚ್ಚಳವಾಗುತ್ತದೆ ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.
    ನಗರದ ಪಾಲಿಕೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಪ್ರಮಾಣ ಹೆಚ್ಚಳ ಹಾಗೂ ನೈತಿಕ ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಮಿತ್ತ ಶುಕ್ರವಾರ ನಡೆದ ಪಂಜಿನ ಹಾಗೂ ಮೇಣದ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಬಾರಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳವಾಗಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯಾದ್ಯಂತ ವಿಶೇಷ ಮತದಾನ ಜಾಗೃತಿ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಮತದಾನ ಕುರಿತು ಅರಿವು ಮೂಡಿಸಲಾಗಿದ್ದು, ಖಂಡಿತವಾಗಿಯೂ ಈ ಬಾರಿ ಶೇಕಡವಾರು ಮತದಾನ ಪ್ರಮಾಣ ಶೇ.85 ರಿಂದ 90 ರಷ್ಟು ಪ್ರಮಾಣ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವೇಳೆ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
    ಮೆರವಣಿಗೆ ಸಾಗುವ ಮಾರ್ಗದಲ್ಲಿನ ಸಾರ್ವಜನಿಕರು, ಪಂಜು ಹಾಗೂ ಮೇಣದಬತ್ತಿ ಹಿಡಿದು ಘೋಷಣೆ ಹಾಕುತ್ತಿದ್ದುದನ್ನು ಕುತೂಹಲದಿಂದ ವೀಕ್ಷಿಸಿದರು.
    ಡೊಳ್ಳು ಕುಣಿತದ ಮೂಲಕ ಪಂಜಿನ ಮೆರವಣಿಗೆಯು ಮಹಾನಗರ ಪಾಲಿಕೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಬೆಂಗಳೂರು ರಸ್ತೆ, ಬ್ರೂಸ್ಪೇಟೆ ಪೆಲೀಸ್ ಠಾಣೆ ಮುಂಭಾಗದಿಂದ ಹೆಚ್.ಆರ್.ಗವಿಯಪ್ಪ ವೃತ್ತದವರೆಗೆ ಆಗಮಿಸಿ ಅಂತ್ಯಗೊಂಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts