More

    ತಪ್ಪಿತಸ್ಥರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ

    ಹಾನಗಲ್ಲ: ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಕೆಲವು ದುಷ್ಕರ್ವಿುಗಳು ನಡೆಸಿದ ಪೂರ್ವ ನಿಯೋಜಿತ ಗಲಭೆಯನ್ನು ಖಂಡಿಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಹಾನಗಲ್ಲ ತಾಲೂಕು ಭಜರಂಗದಳ ಹಾಗೂ ವಿಶ್ವಹಿಂದು ಪರಿಷತ್ ಕಾರ್ಯಕರ್ತರು ಗುರುವಾರ ತಹಸೀಲ್ದಾರ್ ಪಿ.ಎಸ್. ಎರ್ರೀಸ್ವಾಮಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಮನವಿಯಲ್ಲಿ ಕರೊನಾ ಸೇನಾನಿಗಳಾದ ಪೊಲೀಸರು, ಮಾಧ್ಯಮದವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಲ್ಲದೆ, ಸಾರ್ವಜನಿಕರ ಆಸ್ತಿ-ಪಾಸ್ತಿಗಳನ್ನು ನಾಶಪಡಿಸಿದ್ದಾರೆ. ಸ್ಥಳೀಯ ಶಾಸಕರ ನಿವಾಸ ಅಲ್ಲದೆ, ಸಾರ್ವಜನಿಕರ ಮನೆಗಳಿಗೂ ಬೆಂಕಿ ಹಚ್ಚಿ ಗಲಭೆ ಸೃಷ್ಟಿಸಿರುವುದು ಪೂರ್ವ ನಿಯೋಜಿತ ಘಟನೆ ಎಂಬುದನ್ನು ಮೇಲ್ನೋಟಕ್ಕೆ ಸಾಬೀತುಪಡಿಸಿದೆ. ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಕಾನೂನು ಕ್ರಮ ಕೈಗೊಂಡು ಸಾರ್ವಜನಿಕರಿಗೆ, ಸರ್ಕಾರಕ್ಕೆ ಆಗಿರುವ ನಷ್ಟವನ್ನು ತಪ್ಪಿತಸ್ಥರಿಂದಲೇ ಭರಿಸುವ ಕಾನೂನನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಸಂಚಾಲಕ ಎಚ್. ಪ್ರವೀಣಕುಮಾರ ನೇತೃತ್ವದಲ್ಲಿ ಕಾರ್ಯಕರ್ತರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts