More

    ತುಮ್ಮನೇರಳೆಯಲ್ಲಿ ದೇವಸ್ಥಾನ ಉದ್ಘಾಟನೆ ನಾಳೆ

    ನಂಜನಗೂಡು: ತಾಲೂಕಿನ ತುಮ್ಮನೇರಳೆ ಗ್ರಾಮದಲ್ಲಿ ಏ.14 ಹಾಗೂ 15ರಂದು ಶ್ರೀ ಚೋಕಮ್ಮ ತಾಯಿ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ, ಸಪ್ತಮಾತೃಕೆ ಸಮೇತ ಶ್ರೀ ಚೋಕಮ್ಮ ದೇವಿಯ ಮರು ಪ್ರತಿಷ್ಠಾಪನೆ, ವಿಮಾನ ಗೋಪುರ ಸಂಪ್ರೋಕ್ಷಣೆ ಹಾಗೂ ಮನೆಯಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

    ಏ.14ರಂದು ಬೆಳಗ್ಗೆ 9.30ಕ್ಕೆ ಮಂಗಳವಾದ್ಯ, ವೀರಗಾಸೆ ಕಲಾ ತಂಡಗಳೊಂದಿಗೆ ಗ್ರಾಮ ಪ್ರದಕ್ಷಿಣೆ, ಗೋಪೂಜೆ ಮತ್ತಿತರ ಪೂಜಾ ಕೈಂಕರ್ಯಗಳು ಜರುಗಲಿವೆ.

    ಏ.15ರಂದು ಪೀಠ ಪೂಜೆ, ಯಂತ್ರ ಸ್ಥಾಪನೆ, ಶಿಖರ ಕಲಸ ಸ್ಥಾಪನೆ, ಪ್ರಾಣ ಪ್ರತಿಷ್ಠಾಪನೆ, ಹೋಮ, ಹವನಗಳು ನಡೆಯಲಿವೆ.
    ಬೆಳಗ್ಗೆ 10.30ಕ್ಕೆ ದೇವನೂರು ಶ್ರೀ ಗುರುಮಲ್ಲೇಶ್ವರ ದಾಸೋಹ ಮಹಾಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಮಹಾಂತ ಸ್ವಾಮೀಜಿ ಅವರ ಸಮ್ಮುಖ, ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೆಂದ್ರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಧಾರ್ಮಿಕ ಸಭೆ ಜರುಗಲಿದೆ.

    ಮಲ್ಲನಮೂಲೆ ಶ್ರೀಕ್ಷೇತ್ರದ ಶ್ರೀ ಗುರುಕಂಬಳೀಶ್ವರ ಮಠದ ಶ್ರೀ ಚನ್ನಬಸವ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಘಾಟನೆಯನ್ನು ಶ್ರೀ ಮದ್ವಾಟಾಳು ಸೂರ್ಯ ಸಿಂಹಾಸನ ಮಠದ ಡಾ.ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ನೆರವೇರಿಸಲಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಸಾಲೂರು ಬೃಹನ್ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಮೈಸೂರು ಕುದೇರು ಮಠದ ಶ್ರೀ ಗುರುಶಾಂತ ಸ್ವಾಮೀಜಿ, ದಂಡಿಕರೆ ಶ್ರೀ ಮಹಾಂತಸ್ವಾಮಿ ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಹಾಗೂ ಕರೋಹಟ್ಟಿ ವಿರಕ್ತ ಮಠದ ಶ್ರೀ ಬಸವಲಿಂಗ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ದೇವನೂರಿನ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಡಿ.ಎಸ್.ಸದಾಶಿವಮೂರ್ತಿ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದಲ್ಲಿ ವಿವಿಧ ಗ್ರಾಮಗಳ ಮಠಾಧೀಶರು, ಹರಗುರು ಚರಮೂರ್ತಿಗಳು ಪಾಲ್ಗೊಳ್ಳಲಿದ್ದಾರೆ.

    ಏ.15ರಂದು ಮಧ್ಯಾಹ್ನ 12.30ಕ್ಕೆ ಪ್ರಸಾದ ವಿನಿಯೋಗ ಇರಲಿದೆ. ರಾತ್ರಿ 9 ಗಂಟೆಗೆ ದಕ್ಷಯಜ್ಞ ಪೌರಾಣಿಕ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts