More

    ತಮಿಳುನಾಡು ಮೊದಲ ಬಿಜೆಪಿ ಶಾಸಕ ಸಿ.ವೇಲಾಯುಧನ್ ನಿಧನ

    ಚೆನ್ನೈ: ತಮಿಳುನಾಡಿನ ಮೊದಲ ಬಿಜೆಪಿ ಶಾಸಕ ಸಿ.ವೇಲಾಯುಧನ್ ಬುಧವಾರ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
    ಕನ್ಯಾಕುಮಾರಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬವರು ತಿಳಿಸಿದ್ದಾರೆ.

    ಇದನ್ನೂ ಓದಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ!

    ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ, ಮುರುಗನ್​, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಧ್ಯಕ್ಷ ಅಣ್ಣಾಮಲ್ಲೈ ಅವರು ಸೇರಿದಂತೆ ಇನ್ನಿತರು ಸಂತಾಪ ಸೂಚಿಸಿದ್ದಾರೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಮಾಜಿ ಶಾಸಕ ಮತ್ತು ಸಮಾಜ ಸೇವಕ ಸಿ ವೇಲಾಯುಧನ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಬಿಜೆಪಿಯಿಂದ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾದ ಮೊದಲ ವಿಧಾನಸಭಾ ಅಭ್ಯರ್ಥಿಯಾಗಿದ್ದಾರೆ. 1996 ರ ಚುನಾವಣೆಯಲ್ಲಿ ಪದ್ಮನಾಭಪುರಂ ಕ್ಷೇತ್ರವು ಪಕ್ಷಕ್ಕೆ ಮತ್ತು ಸಮಾಜಕ್ಕೆ ಅವರ ಕೊಡುಗೆ ಅಪಾರ ಎಂದು ಪೋಸ್ಟ್ ಮಾಡಿದ್ದಾರೆ.

    1996ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕನ್ಯಾಕುಮಾರಿ ಜಿಲ್ಲೆಯ ಪದ್ಮನಾಭಪುರಂ ವಿಧಾನಸಭಾ ಕ್ಷೇತ್ರದಿಂದ ವೇಲಾಯುಧನ್ ಶಾಸಕರಾಗಿ ಆಯ್ಕೆಯಾಗಿದ್ದರು. ಅವರು ಡಿಎಂಕೆ ಪಕ್ಷದ ಬಾಲ ಜನಾತಿಪತಿ ವಿರುದ್ಧ 4.540 ಮತಗಳಿಂದ ಸೋಲಿಸಿದ್ದರು. ಬಿಜೆಪಿಯ ಮೊದಲ ಶಾಸಕರಾಗಿ ಆಯ್ಕೆಯಾಗಿ ಇತಿಹಾಸ ನಿರ್ಮಿಸಿದ್ದರು.

    ಬಣ್ಣದ ಹೆಸರಲ್ಲಿ ಭಾರತೀಯರ ನಿಂದನೆ: ಸ್ಯಾಮ್​ ಪಿತ್ರೋಡಾ ಹೇಳಿಕೆಗೆ ಅಣ್ಣಾಮಲೈ ತಿರುಗೇಟು 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts