ತರಕಾರಿ ಖರೀದಿ ನಿಲ್ಲ್ಲಿಸಬೇಡಿ; ಸಂಸದ ಡಿಕೆ ಸುರೇಶ್ ಅಭಿಮತ; ಬಡವರಿಗೆ ತರಕಾರಿ ವಿತರಣೆ

03ank news and photos 02
Published on

ಆನೇಕಲ್: ರೈತರ ತೋಟಗಳಿಂದ ತರಕಾರಿ ಖರೀದಿ ಮಾಡುವುದನ್ನು ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಕಾರಣಕ್ಕೂ ನಿಲ್ಲಿಸುವುದು ಬೇಡ ಎಂದು ಸಂಸದ ಡಿಕೆ ಸುರೇಶ್ ತಿಳಿಸಿದರು.

ಬನ್ನೇರುಘಟ್ಟ ಚಂಪಕಧಾಮ ಪಕ್ಕದ ಕಲ್ಯಾಣ ಮಂಟಪದಲ್ಲಿ ಭಾನುವಾರ ರೈತರಿಂದ ಖರೀದಿಸಿದ್ದ ತರಕಾರಿಯನ್ನು ಬಡವರಿಗೆ ವಿತರಿಸಿ ಮಾತನಾಡಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಸಾವಿರಾರು ಲೋಡ್ ತರಕಾರಿಗಳನ್ನು ನೇರವಾಗಿ ರೈತರಿಂದ ಖರೀದಿಸಿ ಪ್ರತಿದಿನ ತಮ್ಮ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರು ಮನೆಗಳಿಗೆ ನೀಡುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಅಚ್ಯುತರಾಜು ಮಾತನಾಡಿ, ಕ್ಷೇತ್ರದ ಜನರು ಆಹಾರ ಪದಾರ್ಥಕ್ಕಾಗಿ ತೊಂದರೆ ಅನುಭವಿಸಬಾರದು ಎಂಬ ನಿಟ್ಟಿನಲ್ಲಿ ರೈತರ ತೋಟಗಳಿಂದ ತರಕಾರಿ ಖರೀದಿಸಿ ಜನರಿಗೆ ವಿತರಿಸುವ ಮೂಲಕ ಎಲ್ಲರೂ ಕ್ಷೇತ್ರದಲ್ಲಿ ಒಗ್ಗೂಡಿ ಕೆಲಸ ಮಾಡಿರುವುದು ಶ್ಲಾಘನೀಯ ಎಂದರು.

ಬಮುಲ್ ಮಾಜಿ ಅಧ್ಯಕ್ಷ ಆರ್.ಕೆ.ರಮೇಶ್ ಮಾತನಾಡಿ, ಈಗಾಗಲೇ 700 ಟನ್ ತರಕಾರಿಯನ್ನು ರೈತರ ತೋಟದಿಂದ ನೇರವಾಗಿ ಖರೀದಿ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರ ಹಾಗೂ ಆನೇಕಲ್ ತಾಲೂಕಿನ ಸುತ್ತಮುತ್ತ ಪ್ರದೇಶಗಳಿಂದ ತರಕಾರಿ ಖರೀದಿಸಿ ಬಡವರಿಗೆ ಹಂಚುವ ಕೆಲಸವನ್ನು ಸಾವಿರಾರು ಯುವಕರು ಕ್ಷೇತ್ರದಾದ್ಯಂತ ಮಾಡುತ್ತಿದ್ದಾರೆ ಎಂದು ಹೇಳಿದರು.

ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net