More

    ತರಬೇತಿ ಕೇಂದ್ರಗಳಿಗೆ ಡಿಸಿ, ಸಿಇಓ ಭೇಟಿ ಪರಿಶೀಲನೆ

    ಬಾಗಲಕೋಟೆ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಆಯಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಾಪಿಸಲಾದ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡ ಪ್ರಥಮ ಹಂತದ ತರಬೇತಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹಾಗೂ ಜಿ.ಪಂ ಸಿಇಓ ಶಶೀಧರ ಕುರೇರ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ತೇರದಾಳ ಮತಕ್ಷೇತ್ರದ ಬನಹಟ್ಟಿ ತಮ್ಮಣ್ಣಪ್ಪ ಚಿಕ್ಕೋಡಿ ವಾಣಿಜ್ಯ & ಕಲಾ ಮಹಾವಿದ್ಯಾಲಯ, ಮುಧೋಳ ಮತಕ್ಷೇತ್ರದ ಎಸ್.ಆರ್.ಕಂಠಿ ಕಾಲೇಜಿನ ಹಾಗೂ ಬಾಗಲಕೋಟೆ ಮತಕ್ಷೇತ್ರದ ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾದ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿದರೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ ಅವರು ಬೀಳಗಿ ಮತಕ್ಷೇತ್ರದ ರುದ್ರಗೌಡ ಪಾಟೀಲ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾದ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


    ಭೇಟಿ ಸಮಯದಲ್ಲಿ ಮತಗಟ್ಟೆ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳ ಹಾಜರಾತಿಯನ್ನು ಪರಿಶೀಲಿಸಿದರು. ಪ್ರತಿಯೊಂದು ತರಬೇತಿ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಾನಕಿ ಕೆ.ಎಂ ಅವರು ಯಾವುದೇ ಅಡೆತಡೆ ಇಲ್ಲದೇ ಮತದಾನ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಮೊದಲನೇ ಹಂತದ ತರಬೇತಿ ನೀಡಲಾಗುತ್ತಿದ್ದು, ತಾವುಗಳು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಸಂಪೂರ್ಣ ತರಬೇತಿ ಪಡೆಯಲು ಸೂಚಿಸಿದರು.

    ಜಿಲ್ಲೆಯಲ್ಲಿರುವ ಏಳು ಮತಕ್ಷೇತ್ರ ವ್ಯಾಪ್ತಿಯಲ್ಲಿ ತರಬೇತಿ ಹಮ್ಮಿಕೊಂಡಿದ್ದು, ೨೪೧೮ ಮತಗಟ್ಟೆ ಅಧಿಕಾರಿಗಳು, ೨೪೧೮ ಸಹಾಯಕ ಮತಗಟ್ಟೆ ಅಧಿಕಾರಿಗಳು ಸೇರಿ ಒಟ್ಟು ೪೮೩೬ ಜನ ಅಧಿಕಾರಿಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿತ್ತು. ಮುಧೋಳ ಮತಕ್ಷೇತ್ರದಲ್ಲಿ ೫೨೮, ತೇರದಾಳ ಮತಕ್ಷೇತ್ರದಲ್ಲಿ ೪೩೯, ಜಮಖಂಡಿ ಮತಕ್ಷೇತ್ರದಲ್ಲಿ ೬೩೨, ಬೀಳಗಿ ಮತಕ್ಷೇತ್ರದಲ್ಲಿ ೬೭೩, ಬಾದಾಮಿ ಮತಕ್ಷೇತ್ರದಲ್ಲಿ ೮೧೩, ಬಾಗಲಕೋಟೆ ಮತಕ್ಷೇತ್ರದ ಲ್ಲಿ ೧೧೩೨ ಹಾಗೂ ಹುನಗುಂದ ಮತಕ್ಷೇತ್ರದಲ್ಲಿ ೬೧೯ ಜನರಿಗೆ ತರಬೇತಿ ಹಮಿಕೊಳ್ಳಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts