More

    ತಾಲೂಕಿಗೊಂದು ಡಯಾಲಿಸಿಸ್ ಕೇಂದ್ರ ಸ್ಥಾಪನೆ

    ಸರಗೂರು ; ಗ್ರಾಮೀಣ ಪ್ರದೇಶದ ಜನರು ಜಿಲ್ಲಾ ಕೇಂದ್ರಕ್ಕೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ತಾಲೂಕಿಗೊಂದು ಡಯಾಲಿಸಿಸ್ ಕೇಂದ್ರವನ್ನು ಪ್ರಾರಂಭ ಮಾಡುತ್ತೇವೆ ಎಂದು ಆರೋಗ್ಯ ಇಲಾಖೆ(ಎನ್‌ಸಿಡಿ ವಿಭಾಗ) ರಾಜ್ಯ ಉಪ ನಿರ್ದೇಶಕ ಡಾ.ಗೋಳೂರು ಶ್ರೀನಿವಾಸ್ ತಿಳಿಸಿದರು.
    ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊಸದಾಗಿ ಪ್ರಾರಂಭಿಸಿರುವ ಡಯಾಲಿಸಿಸ್ ಕೇಂದ್ರ ಉದ್ಘಾಟನೆ ಹಿನ್ನೆಲೆಯಲ್ಲಿ ಗುರುವಾರ ಭೇಟಿ ನೀಡಿ ಮಾತನಾಡಿದರು.
    ತಾಲೂಕು ಮಟ್ಟದಲ್ಲಿ ಡಯಾಲಿಸಿಸ್ ಕೇಂದ್ರ ಇಲ್ಲದೆ ಬಡ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕು ಕೇಂದ್ರದಲ್ಲೇ ಸ್ಥಾಪನೆ ಮಾಡಲು ಸರ್ಕಾರ ಸೂಚನೆ ನೀಡಿದೆ. ಶೀಘ್ರವೇ ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಪ್ರಾರಂಭಿಸುತ್ತಿದ್ದೇವೆ ಎಂದು ತಿಳಿಸಿದರು.
    ತಾಲೂಕು ಆರೋಗ್ಯಾಧಿಕಾರಿ ಡಾ.ಟಿ. ರವಿಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ರೋಗಿಗಳು ಆಸ್ಪತ್ರೆಗೆ ತಲುಪಲು ಮತ್ತು ಡಯಾಲಿಸಿಸ್‌ಗೆ ಒಳಗಾಗಲು ಕಷ್ಟಪಡುತ್ತಿದ್ದಾರೆ. ಹಾಗಾಗಿ, ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಕೇಂದ್ರದ ಅಗತ್ಯವಿದೆ. ಸರಗೂರಿನಲ್ಲೂ ಶೀಘ್ರದಲ್ಲೇ ಕೇಂದ್ರ ಸ್ಥಾಪನೆಯ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.
    ಹಣಕಾಸು ಇಲಾಖೆ ಸಲಹೆಗಾರರಾದ ನೇತ್ರಾವತಿ, ಮೈಸೂರು ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಎನ್‌ಸಿಡಿ ವಿಭಾಗದ ವೈದ್ಯಾಧಿಕಾರಿ ಡಾ. ಅರ್ಚನಾ, ಹರೀಶ್, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಪಾರ್ಥಸಾರಥಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಭಾಗ್ಯಲಕ್ಷ್ಮೀ, ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ ಇನ್ನಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts