More

    ತಳವಾರ- ಪರಿವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ನೀಡಿ: ಸಿಎಂಗೆ ಎಂ.ಬಿ. ಪಾಟೀಲ ಒತ್ತಾಯ

    ವಿಜಯಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗೆಜೆಟ್ ಆದೇಶದಂತೆ ತಳವಾರ ಮತ್ತು ಪರಿವಾರ ಸಮಾಜದವರಿಗೆ ಎಸ್‌ಟಿ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಬುಧವಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.

    ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಯಡಿಯೂರಪ್ಪನವರನ್ನು ಭೇಟಿ ಮಾಡಿದ ಎಂ.ಬಿ.ಪಾಟೀಲ ಕರ್ನಾಟಕದಲ್ಲಿ ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ತಳವಾರ ಸಮಾಜದವರು ಇದ್ದು, ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಭಾರತ ಸರ್ಕಾರದ ಗೆಜೆಟ್ ಅಮೈಂಡ್ ಮೆಂಟ್ ಕಾಯ್ದೆ 2020ರ ಪ್ರಕಾರ ಹಾಗೂ ಕರ್ನಾಟಕ ಸರ್ಕಾರದ ಕರ್ನಾಟಕ ರಾಜ್ಯ ಎಸ್‌ಟಿ ಪಟ್ಟಿ ಕ್ರ.ಸಂ.38 ತಿದ್ದುಪಡಿ ಮಾನ್ಯ ರಾಷ್ಟ್ರಪತಿಗಳಿಂದ ಅನುಮೋದನೆಗೊಂಡಿರುತ್ತದೆ. ಈ ಆದೇಶದಂತೆ ನಾಯ್ಕಡ, ನಾಯಕ ಪದಗಳ ಸಮಾನಂತರ ಪದಗಳಾದ ಪರಿವಾರ, ತಳವಾರ ಜಾತಿ ಪದಗಳನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅನ್ವಯವಾಗುವಂತೆ ಪ್ರತ್ಯೇಕವಾಗಿ ಕ್ರಮ ಸಂಖ್ಯೆ 38ರಲ್ಲಿ ಸೇರ್ಪಡೆ ಮಾಡಿರುತ್ತಾರೆ. ಆದರೆ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ಕಚೇರಿಯಲ್ಲಿ ಈ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ ಎಂದು ವಿವರಿಸಿದರು.
    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸಿದ ಆದೇಶದಂತೆ ತಳವಾರ-ಪರಿವಾರ ಜಾತಿಯವರಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಕ್ತ ನಿರ್ದೇಶನ ನೀಡಲು ಎಂ.ಬಿ.ಪಾಟೀಲ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ವಿಷಯ ನನ್ನ ಗಮನದಲ್ಲಿದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts