More

    ತಹಸೀಲ್ದಾರ್ ಕಚೇರಿಗೆ ದಾರಿ ಯಾವುದಯ್ಯಾ?

    ರೋಣ: ತಾಲೂಕಿನ ವಿವಿಧ ಗ್ರಾಮಗಳಿಂದ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಕೆಲಸಕ್ಕೆ ದ್ವಿಚಕ್ರ ವಾಹನಗಳಲ್ಲಿ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ, ಸರಿಯಾದ ರ್ಪಾಂಗ್ ವ್ಯವಸ್ಥೆ ಇಲ್ಲದಿರುವುದರಿಂದ ವಾಹನಗಳನ್ನು ನಿಲ್ಲಿಸಲು ಸವಾರರು ಪ್ರಯಾಸ ಪಡುವಂತಾಗಿದೆ. ಅನಿವಾರ್ಯವಾಗಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಕಚೇರಿ ಕೆಲಸಕ್ಕೆ ಬರುವ ಸಾಮಾನ್ಯ ಜನರು ಪರದಾಡುವಂತಾಗಿದೆ.

    ಸರಿಯಾದ ರ್ಪಾಂಗ್ ವ್ಯವಸ್ಥೆ ಇಲ್ಲದ್ದರಿಂದ ಬೈಕ್, ಕಾರ್ ಸೇರಿ ವಿವಿಧ ವಾಹನಗಳನ್ನು ರಸ್ತೆ ಮಧ್ಯದಲ್ಲೇ ನಿಲ್ಲಿಸಲಾಗುತ್ತಿದೆ. ಇದರಿಂದಾಗಿ ಕಚೇರಿಗೆ ಹೋಗುವ ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಹೀಗಾಗಿ ತಹಸೀಲ್ದಾರ್ ಕಚೇರಿಗೆ ಹೋಗುವ ದಾರಿ ಯಾವುದಯ್ಯಾ ಎಂದು ಕಚೇರಿಯ ಮುಂದೆ ನಿಂತು ಸಾರ್ವಜನಿಕರು ಕೇಳುವ ಪರಿಸ್ಥಿತಿ ನಿರ್ವಣವಾಗಿದೆ.

    ನನಗೂ ಈ ಬಗ್ಗೆ ಜನರಿಗೆ ಹೇಳಿ ಹೇಳಿ ಸಾಕಾಗಿದೆ. ಸೋಮವಾರದಿಂದ ಕಚೇರಿ ಸಂಕೀರ್ಣದ ಮುಖ್ಯದ್ವಾರಕ್ಕೆ ಬೀಗ ಜಡಿದು ಜನರು ಮಾತ್ರ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗುವುದು.

    ಜೆ.ಬಿ. ಜಕ್ಕನಗೌಡ್ರ, ತಹಸೀಲ್ದಾರ್

    ಕಳೆದ ಮೂರು ತಿಂಗಳಿಂದ ವೃದ್ಧಾಪ್ಯ ವೇತನ ಬಾರದಿರುವುದನ್ನು ವಿಚಾರಿಸಲು ತಹಸೀಲ್ದಾರ್ ಕಚೇರಿಗೆ ಬಂದಿದ್ದೇನೆ. ಆದರೆ, ಕಚೇರಿಗೆ ಹೋಗುವ ರಸ್ತೆಯುದ್ದಕ್ಕೂ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿರುವುದರಿಂದ ಕಚೇರಿ ಒಳಗೆ ಹೇಗೆ ಹೋಗಬೇಕೆನ್ನುವುದೇ ತಿಳಿಯದಂತಾಗಿದೆ.

    | ಸಿದ್ದಮ್ಮಾ ಮಾದರ ಹೊನ್ನಿಗನೂರ ಗ್ರಾಮಸ್ಥೆ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts