More

    ತಹಸೀಲ್ದಾರ್ ಕಚೇರಿ ಗುತ್ತಿಗೆ ಸಿಬ್ಬಂದಿಗೆ ಕರೊನಾ



    ಧಾರವಾಡ: ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್​ನಿಗೆ ಕರೊನಾ ಸೋಂಕು ತಗುಲಿದೆ.

    ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ವ್ಯಕ್ತಿ, ಗ್ರಾಮೀಣ ಪ್ರದೇಶದವನಾಗಿದ್ದರೂ ನಗರದ ತೇಜಸ್ವಿನಗರದಲ್ಲಿ ಬಾಡಿಗೆ ಮನೆಯಲ್ಲಿದ್ದ. ಆತ ನಿರಂತರವಾಗಿ ಕಚೇರಿ ಕಾರ್ಯ ನಿರ್ವಹಿಸಿದ್ದರು, ಶುಕ್ರವಾರ ಕೋವಿಡ್ ಸೋಂಕು ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ತಹಸೀಲ್ದಾರ್ ಕಚೇರಿ ಆವರಣ ಹಾಗೂ ಕೊಠಡಿಗಳಲ್ಲಿ ರಾಸಾಯನಿಕ ದ್ರಾವಣ ಸಿಂಪಡಣೆ ಮಾಡಲಾಗಿದೆ. ಆತ ತಹಸೀಲ್ದಾರ್ ಕಚೇರಿಯ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಹಲವರಲ್ಲಿ ಆತಂಕ ಸೃಷ್ಟಿಸಿದೆ.

    ಉಪನಗರ ಪೊಲೀಸ್ ಠಾಣೆ ಬಂದ್

    ಹುಬ್ಬಳ್ಳಿ: ಪೊಲೀಸ್ ಕಾನ್ಸ್​ಟೇಬಲ್​ಗೆ ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಪನಗರ ಪೊಲೀಸ್ ಠಾಣೆಯನ್ನು ಶುಕ್ರವಾರ ಸಂಪೂರ್ಣ ಬಂದ್ ಮಾಡಲಾಗಿತ್ತು.

    ಠಾಣೆ ಎದುರು ಬ್ಯಾರಿಕೇಡ್ ಅಳವಡಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿತ್ತು. ಠಾಣೆಗೆ ಎರಡು ಬಾರಿ ಸ್ಯಾನಿಟೈಸೇಶನ್ ಮಾಡಲಾಗಿದೆ. ಠಾಣೆಯ ಇತರೆ ಸಿಬ್ಬಂದಿ ಹೊರಗಿನಿಂದಲೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

    ಉಪನಗರ ಪೊಲೀಸ್ ಠಾಣೆ ಕಟ್ಟಡದಲ್ಲಿ ಮಹಿಳಾ ಪೊಲೀಸ್ ಠಾಣೆ, ಎಸಿಪಿ ಉತ್ತರ ಉಪವಿಭಾಗದ ಕಚೇರಿ, ಟ್ರಾಫಿಕ್ ಮ್ಯಾನೇಜ್​ವೆುಂಟ್ ಕಂಟ್ರೋಲ್ (ಟಿಎಂಸಿ) ರೂಮ್ ಸೈಬರ್ ಕ್ರೖೆಂ ಪೊಲೀಸ್ ಠಾಣೆ ಇದ್ದು, ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ.

    ಕರ್ಪ್ಯೂ ಬಿಗಿಗೊಳಿಸಲು ಆದೇಶ

    ಧಾರವಾಡ: ಸರ್ಕಾರ ನಿತ್ಯ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5ರವರೆಗೆ ಕರ್ಪ್ಯೂ ಜಾರಿಗೊಳಿಸಿದೆ. ಆದಾಗ್ಯೂ ಅನಗತ್ಯ ಮತ್ತು ಖಾಸಗಿ ವಾಹನಗಳಲ್ಲಿ ಜನ ಸಂಚರಿಸುತ್ತಿರುವುದು ಕಂಡು ಬರುತ್ತಿದೆ. ಕರ್ಫ್ಯೂ ಆದೇಶವನ್ನು ಪೊಲೀಸ್ ಇಲಾಖೆ ಮತ್ತು ಸಂಬಂಧಿಸಿದ ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚಿಸಿದ್ದಾರೆ.

    ತಮ್ಮ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಕರ್ಫ್ಯೂ ಆದೇಶ ಉಲ್ಲಂಘಿಸಿ ಸಂಚರಿಸುವ, ಗುಂಪು ಸೇರುವ ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

    ಜಿಪಂ ಸಿಇಒ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕರೊನಾ ನಿಯಂತ್ರಣದ ಮಾರ್ಗಸೂಚಿಗಳ ಕುರಿತು ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಮಾಸ್ಕ್ ಧರಿಸದ ಜನರಿಗೆ ದಂಡ ವಿಧಿಸಲು ಸೂಚಿಸಲಾಗಿದೆ ಎಂದರು.

    ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಮಾತನಾಡಿ, ಜು. 3ರವರೆಗೆ ಮಾಸ್ಕ್ ಧರಿಸದೆ ನಿಯಮ ಉಲ್ಲಂಘಿಸಿದ ಒಟ್ಟು 1543 ಜನರಿಂದ 3,08,600 ರೂ. ದಂಡ ಸಂಗ್ರಹಿಸಲಾಗಿದೆ ಎಂದರು.

    ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಯಶವಂತ ಮದೀನಕರ, ಕಿಮ್ಸ್​ನ ಡಾ. ಲಕ್ಷ್ಮೀಕಾಂತ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಕೆ. ಮಾನಕರ, ಡಾ. ಸುಜಾತಾ ಹಸವಿಮಠ, ಡಾ. ಶಶಿ ಪಾಟೀಲ, ಡಾ. ಎಸ್.ಎಂ. ಹೊನಕೇರಿ, ಡಾ. ತನುಜಾ, ಡಾ. ಶಶಿಕಲಾ ನಿಂಬಣ್ಣವರ, ತಹಸೀಲ್ದಾರರಾದ ಡಾ. ಸಂತೋಷಕುಮಾರ ಬಿರಾದಾರ, ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ, ನವೀನ ಹುಲ್ಲೂರ, ಅಶೋಕ ಶಿಗ್ಗಾಂವಿ, ಇತರರು ಇದ್ದರು.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts