More

    ತಹಸೀಲ್ದಾರ್ ಹತ್ಯೆಗೆ ಸರ್ಕಾರಿ ನೌಕರರ ಆಕ್ರೋಶ


    ವಿಜಯವಾಣಿ ಸುದ್ದಿಜಾಲ ಕಲಬುರಗಿ
    ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ ಹತ್ಯೆ ಮಾಡಿದ ಆರೋಪಿಯನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
    ರಾಜ್ಯದ ನೌಕರರು ನಿರ್ಭಿತಿಯಿಂದ ಕಾರ್ಯನಿರ್ವಹಿಸುವ ವಾತಾವರಣ ಸೃಷ್ಟಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬಕ್ಕೆ ಸಕರ್ಾರದಿಂದ ಗರಿಷ್ಠ ಮಟ್ಟದ ಪರಿಹಾರ ನೀಡಬೇಕು. ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪ ಆಧಾರಿತ ಸಕರ್ಾರಿ ಕೆಲಸ ನೀಡಬೇಕು ಎಂದು ಮನವಿ ಮಾಡಿದರು.
    ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಕರ್ತವ್ಯನಿರ್ವಹಿಸುವ ಸಂದರ್ಭದಲ್ಲಿ ಇಂತಹ ಘಟನೆಗಳು ಆಗಾಗ್ಗೆ ಸಂಭವಿಸುತ್ತಿದ್ದು, ಕಂದಾಯ, ಭೂಮಾಪನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಆರೋಗ್ಯ ಸೇರಿ ಹಲವು ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
    ಸಕರ್ಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಮನವಿಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಎಂ.ವೆಂಕಟರಾವ, ಡಾ.ಬಾಬು, ಸುನಿಲ ಕುಲಕರ್ಣಿ , ಹಣಮಂತರಾಯ, ಗಣೇಶಕುಮಾರ, ಸತೀಶ ಸಜ್ಜನ್ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts