More

    ತಾರತಮ್ಯ ಜೀವನ ಬಿಟ್ಟು ತಾಳ್ಮೆಯಿಂದ ಇರಿ


    ಯಾದಗಿರಿ: ಅವಿಭಕ್ತ ಕುಟುಂಬದಲ್ಲಿ ಮಹಿಳೆಯರು ಅನ್ಯೊನ್ಯತೆಯಿಂದ ಇರುವ ಜತೆಗೆ ತಾಳ್ಮೆಯಿಂದ ಇದ್ದಲ್ಲಿ ಕೌಟುಂಬಿಕ ದೌರ್ಜನ್ಯಗಳಿಂದ ದೂರ ಉಳಿಯಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್.ರೇಖಾ ತಿಳಿಸಿದರು.

    ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ, ಪೊಲೀಸ್, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ ಹಾಗೂ ನಿಯಮಗಳು-2006ರ ಕುರಿತು ಸಂರಕ್ಷಣಾಧಿಕಾರಿಗಳು ಹಾಗೂ ಸಹಭಾಗೀದಾರ ಇಲಾಖೆಗಳ ಅಧಿಕಾರಿಗಳಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಎರಡು ದಿನಗಳ ತರಬೇತಿಗೆ ಉದ್ಘಾಟಿಸಿ ಅವರು ಮಾತನಾಡಿದರು.
    ಪ್ರತಿ ಹೆಣ್ಣು ಮಕ್ಕಳು ಒಂದಿಲ್ಲೊಂದು ದೌರ್ಜನ್ಯಕ್ಕೆ ತುತ್ತಾಗುತ್ತಿದ್ದಾರೆ. ಶಿಶು ಭ್ರೂಣ ಹತ್ಯೆ, ಗಂಡು- ಹೆಣ್ಣು ವಿದ್ಯಾಭ್ಯಾಸದಲ್ಲಿ ತಾರತಮ್ಯಗಳಂಥ ಸಮಸ್ಯೆಗಳು ಇನ್ನೂ ಸಮಾಜದಲ್ಲಿ ಬೇರೂರಿವೆ. ಇತ್ತೀಚಿಗೆ ಹೆಣ್ಣು ಮಕ್ಕಳಿಗೆ ಕುಟುಂಬಗಳಲ್ಲಿ ಒಳ್ಳೆಯ ಸಂಸ್ಕಾರ, ಶಿಕ್ಷಣ, ಕುಟುಂಬದೊಂದಿಗೆ ಅನ್ಯೊನ್ಯತೆಯೊಂದಿಗೆ ಇರುತ್ತಿರುವುದು ಸಮಾಧಾನಕರ ಸಂಗತಿ. ಅದರಂತೆ ಸಕರ್ಾರವು ಕೂಡ ಅನ್ನದಾನ, ಉಚಿತ ಶಿಕ್ಷಣ, ವಿವಿಧ ಇಲಾಖೆಗಳ ಮೂಲಕ ವಿದ್ಯಾಭ್ಯಾಸಕ್ಕೆ ನೀಡುತ್ತಿರುವ ಸೌಲಭ್ಯಗಳು ಹಾಗೂ ಪ್ರಾಮುಖ್ಯತೆಗಳು ಹೆಣ್ಣು ಮಕ್ಕಳಿಗೆ ಸಹಕಾರಿಯಾಗಿವೆ. ಸ್ವಾಭಿಮಾನ ಜೀವನಕ್ಕೆ ನೆರವಾಗುತ್ತಿವೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts