More

    ತಾಲೂಕು ಮಟ್ಟದ ಪ್ರತಿಭಾ ಕಾರಂಜಿ


    ಹಾಸನ : ಮಕ್ಕಳಲ್ಲಿ ಅಡಗಿರುವಂತಹ ಜ್ಞಾನ ಹಾಗೂ ಪ್ರತಿಭೆಯನ್ನು ಗುರುತಿಸಿ ಹೊರತರಲು ಇಂತಹ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ವೇದಿಕೆಯಾಗಿದೆ ಎಂದು ಪುರಸಭೆ ಅಧ್ಯಕ್ಷ ಸಿ.ಎನ್.ದಾನಿ ಹೇಳಿದರು.

    ಬೇಲೂರು ಪಟ್ಟಣದ ಎಸ್‌ಇಎಸ್ ಬಾಲಿಕಾ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶುಭ ಹಾರೈಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜತೆಗೆ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ಪ್ರತಿಭಾ ಕಾರಂಜಿಗಳಲ್ಲಿ ತೊಡಗಿಸಬೇಕು. ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ಗಮನಿಸಿ ಅವರಿಗೆ ಯಾವುದರಲ್ಲಿ ಆಸಕ್ತಿ ಹೆಚ್ಚಾಗಿದೆಯೋ ಎಂಬುದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಿದಾಗ ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರಕಾಶಿಸುವಂತೆ ಮಾಡಲು ಸಾಧ್ಯವಾಗುತ್ತದೆ ಎಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಬಿ.ಪಾಲಾಕ್ಷ ಮಾತನಾಡಿದರು. ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ವಿಭಿನ್ನವಾದ ವೇಷಭೂಷಣದೊಂದಿಗೆ ಕಣ್ಮನ ಸೆಳೆದರು.


    ತಾಪಂ ಇಒ ಸುನೀತ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೇಮಂತ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮುಳ್ಳಯ್ಯ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಜಗದೀಶ್ ನಾಯಕ್, ಸಂಪತ್, ರೂಪ, ಎಸ್‌ಇಎಸ್ ಶಾಲೆಯ ಪ್ರಾಂಶುಪಾಲ ಹರೀಶ್, ಶಿವಪ್ಪ ಇದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts