More

    ತುಮಕೂರು ಜಿಲ್ಲೆಯಲ್ಲಿ ಕೆಸೆಟ್ ಸುಸೂತ್ರ ; 9 ಉಪಕೇಂದ್ರಗಳಲ್ಲಿ ಪರೀಕ್ಷೆ

    ತುಮಕೂರು : ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) ನಗರದ 9 ಉಪಕೇಂದ್ರಗಳಲ್ಲಿ ಭಾನುವಾರ ಸುಸೂತ್ರವಾಗಿ ನಡೆಯಿತು. ಜಿಲ್ಲೆಯಲ್ಲಿ ಈ ಬಾರಿ 3731 ಅಭ್ಯರ್ಥಿಗಳು ಕೆಸೆಟ್ ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದರು.

    ತುಮಕೂರು ವಿಶ್ವವಿದ್ಯಾಲಯ ವಿಜ್ಞಾನ, ಕಲಾ ಕಾಲೇಜು, ಸಿದ್ಧಗಂಗಾ ಫಾರ್ಮಸಿ ಕಾಲೇಜು, ಬಟವಾಡಿಯ ಚೇತನ ವಿದ್ಯಾಮಂದಿರ, ಶ್ರೀಸಿದ್ಧಗಂಗಾ ಮಹಿಳಾ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು, ಶ್ರೀಸಿದ್ಧಗಂಗಾ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು, ಹೊರಪೇಟೆಯ ಚೇತನ ವಿದ್ಯಾಮಂದಿರ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ನಡೆಯಿತು.

    ಕರೊನಾ ಮಾರ್ಗಸೂಚಿ: ಕರೊನಾತಂಕದ ಹಿನ್ನೆಲೆಯಲ್ಲಿ ಕರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲಾಯಿತು. ಅಭ್ಯರ್ಥಿಗಳು ಮಾಸ್ಕ್ ಧರಿಸಿ, ಪರಸ್ಪರ ಅಂತರ ಕಾಪಾಡಿಕೊಂಡು ಪರೀಕ್ಷೆಗೆ ಹಾಜರಾಗಿದ್ದರು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಿದ ಬಳಿಕ ಅಭ್ಯರ್ಥಿಗಳ ಕೈಗಳಿಗೆ ಸ್ಯಾನಿಟೈಸರ್ ಹಾಕಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

    ಎರಡು ಅವಧಿಗಳಲ್ಲಿ ಪರೀಕ್ಷೆ ನಡೆಯಿತು. ಮೊದಲನೆ ಅವಧಿಯಲ್ಲಿ ಪತ್ರಿಕೆ-1 ಹಾಗೂ ಬೆಳಗ್ಗೆ 9.30ರಿಂದ 10.30 ಗಂಟೆಯವರೆಗೆ ಹಾಗೂ ಎರಡನೇ ಅವಧಿಯಲ್ಲಿ ಪತ್ರಿಕೆ-2 ಬೆಳಗ್ಗೆ 11ರಿಂದ ಮಧ್ಯಾಹ್ನ 1ಗಂಟೆಯವರೆಗೆ ನಡೆಯಿತು. ಬೆಳಗ್ಗೆ 8ರಿಂದಲೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ರಿಜಿಸ್ಟ್ರಾರ್ ನಂಬರ್, ಕೊಠಡಿ ಸಂಖ್ಯೆ ನೋಡಿಕೊಂಡು ಗೊಂದಲಗಳಿಗೆ ಆಸ್ಪದ ನೀಡದೆ ಪರೀಕ್ಷೆ ಬರೆದರು.

    ಜಿಲ್ಲೆಯಲ್ಲಿ ಈ ಬಾರಿ 3731 ಅಭ್ಯರ್ಥಿಗಳು ಕೆಸೆಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಸುಸೂತ್ರವಾಗಿ ಪರೀಕ್ಷೆ ನಡೆಯಿತು. ಎಲ್ಲಿಯೂ ಗೊಂದಲಗಳಿಗೆ ಆಸ್ಪದ ಇರಲಿಲ್ಲ. ಕರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲಾಯಿತು. ಗೈರಾದವರ ಮಾಹಿತಿ ಸದ್ಯಕ್ಕೆ ಸಿಕ್ಕಿಲ್ಲ.
    ಡಾ.ಕೆ.ಎಸ್.ಗಿರೀಶ್ ಕೆಸೆಟ್ ಪರೀಕ್ಷಾ ನೋಡಲ್ ಅಧಿಕಾರಿ  ಪರೀಕ್ಷೆ ಬರೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts