More

    ತುಳಿತಕ್ಕೆ ಒಳಗಾದವರನ್ನು ಮುಖ್ಯವಾಹಿನಿಗೆ ತಂದ ನಾಯಕ

    ಹಾಸನ : ಜಾತಿಗಳಿಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಿ ತುಳಿತಕ್ಕೆ ಒಳಗಾದವರನ್ನು ಮುಖ್ಯವಾಹಿನಿಗೆ ತರುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಶ್ರಮಿಸಿದರು ಎಂದು ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಆರ್.ನವೀನ್ ಕುಮಾರ್ ಹೇಳಿದರು.


    ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಆಲೂರು ತಾಲೂಕಿನ ಪಾಳ್ಯ ಹೋಬಳಿಯ ಚಿಕ್ಕಕಣಗಾಲು ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಯುವಕರು ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


    ಮುಖಂಡ ಸುದರ್ಶನ್ ಮಾತನಾಡಿ, ಭಾರತ ಸಂವಿಧಾನ ಇಡೀ ವಿಶ್ವದಲ್ಲೇ ಶ್ರೇಷ್ಠವಾದ ಸಂವಿಧಾನವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರು ಶೈಕ್ಷಣಿಕ, ರಾಜಕೀಯ, ಔದ್ಯೋಗಿಕವಾಗಿ ಗುರುತಿಸಿಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.


    ಕಾರ್ಯಕ್ರಮಕ್ಕೂ ಮುನ್ನ ಡಾ.ಬಿ.ಆರ್ ಅಂಬೇಡ್ಕರ್ ಯುವಜನ ಸಂಘದ ವತಿಯಿಂದ ಭಾವಚಿತ್ರ ಮೆರವಣಿಗೆ ಮಾಡಲಾಯಿತು.


    ತಾಳೂರು ಗ್ರಾಮ ಪಂಚಾಯಿತಿ ಸದಸ್ಯ ಅಣ್ಣಪ್ಪ, ಡಾ.ಬಿ.ಆರ್ ಅಂಬೇಡ್ಕರ್ ಯುವಜನ ಸಂಘದ ಜಿಲ್ಲಾಧ್ಯಕ್ಷ ದಿನೇಶ್, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಎಂ.ಜಿ ಪೃಥ್ವಿ, ಮರಗಟ್ಟ ಗಾಂಧಾರ ಬುದ್ಧ ವಿಹಾರ ಚಾರಿಟೆಬಲ್ ಟ್ರಸ್ಟ್ ಸಹಕಾರ್ಯದರ್ಶಿ ಶಶಿಧರ್ ಮೌರ್ಯ, ಮುಖಂಡರಾದ ದೇವರಾಜ್, ಲಿಂಗರಾಜು, ಶಾಲಾ ಶಿಕ್ಷಕರಾದ ರಘು, ಮೊಹನ್, ನಾಗರಾಜ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts