More

    ತುಷ್ಟೀಕರಣದ ರಾಜಕೀಯ ಸಲ್ಲ

    ಚಿಕ್ಕಮಗಳೂರು: ಪಿಎಫ್​ಐ ಹಾಗೂ ಸಹ ಸಂಘಟನೆಗಳನ್ನು ನಿಷೇಧಿಸಿರುವುದು ಸರಿಯಾಗಿದೆ. ಆದರೆ ವಿದ್ರೋಹಿ ಹಾಗೂ ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜದ ಒಳಗಡೆಯೇ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

    ಐಸಿಸ್ ಮಾದರಿಯ ಉಗ್ರಗಾಮಿಗಳನ್ನು ಬೆಂಬಲಿಸಿದ, ದೇಶದ ಒಳಗೆ ಅಭದ್ರತೆ, ಅಂತರ್ಯುದ್ಧ, ದೇಶದ್ರೋಹದ ಸಂಚು ಮಾಡುತ್ತಿದ್ದ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟೀಕರಣ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ದೃಷ್ಟಿಯ ರಾಜಕಾರಣ ಮಾಡಬಾರದು ಎಂದು ಹೇಳಿಕೆ ನೀಡಿದ್ದಾರೆ.

    ದೇಶದ ಭದ್ರತೆ, ಸಮಾಜದ ಗೌರವ ಕಾಪಾಡುವ ನಿಟ್ಟಿನಲ್ಲಿ ರಾಷ್ಟ್ರಪ್ರೇಮಿ ಮುಸ್ಲಿಮರು ಯೋಚನೆ ಮಾಡಬೇಕು. ರಾಷ್ಟ್ರ ವಿರೋಧಿ ಹಾಗೂ ಮತಾಂಧತೆ ವಿರುದ್ಧ ಅರಿವು ಮೂಡಿಸಬೇಕಿದೆ. ನಿಷೇಧದ ನಂತರ ಪಿಎಫ್​ಐ ಸಂಘಟನೆಗೆ ಸೇರಿದ ದುಷ್ಟ ಶಕ್ತಿಗಳು ಭೂಗತರಾಗಿ ಕಾರ್ಯನಿರ್ವಹಿಸುವ, ಸಮಾಜವನ್ನು ಪ್ರಚೋದಿಸುವ, ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಇಂತಹ ಯಾವುದೇ ಘಟನೆಗಳು ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts