More

    ತೊಂದರೆಯಾಗದಂತೆ ನಿಗಾವಹಿಸಲು ನಿರ್ದೇಶನ

    ಬಳ್ಳಾರಿ : ಮತಗಟ್ಟೆಗಳಲ್ಲಿನ ಅಗತ್ಯ ಸಿದ್ಧತೆ ಖಾತ್ರಿ ಪಡಿಸಿಕೊಳ್ಳಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ ಎಲ್ಲ ಡಿಸಿಗಳಿಗೆ ಸೂಚಿಸಿದರು.
    ರಾಜ್ಯದ ಎರಡನೇ ಹಂತದ ಲೋಕಸಭೆ ಚುನಾವಣೆಯ ಪೂರ್ವ ಸಿದ್ಧತೆಯ ಕುರಿತು ಬುಧವಾರ ನಡೆದ ಡಿಸಿ, ಸಿಇಒ ಮತ್ತು ಎಸ್ಪಿ ಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದರು. ಆಯಾ ಜಿಲ್ಲೆಯ ಎಲ್ಲ ಮತಗಟ್ಟೆಗಳಿಗೂ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಶ್ಯಾಮಿಯಾನ ವ್ಯವಸ್ಥೆ, ರ‌್ಯಾಂಪ್, ವೀಲ್ಚೇರ್ ಹಾಗೂ ಇತರೆ ಅಗತ್ಯ ವ್ಯವಸ್ಥೆಗಳ ಸಿದ್ಧತೆ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ರಾಜ್ಯದಲ್ಲಿ ಬಿಸಿಲಿನ ತಾಪಮಾನದ ಶಾಖಾಘಾತವಿದ್ದು, ಆಂಬುಲೆನ್ಸ್ ಸೇವೆ ಒದಗಿಸಬೇಕು ಎಂದು ತಿಳಿಸಿದರು. ಮತದಾನದ 48 ಗಂಟೆಗಳ ಮುಂಚೆ ಕೆಲವು ವಿಶೇಷ ನಿಯಮಾವಳಿಗಳು ಜಾರಿಯಲ್ಲಿರುತ್ತವೆ. ಬಹಿರಂಗ ಸಭೆಗೆ ಅನುಮತಿಯಿಲ್ಲ. ಎಲ್ಲಾ ಜಿಲ್ಲಾ ವ್ಯಾಪ್ತಿಯಲ್ಲಿ ರೆಸಾರ್ಟ, ಹೋಟೆಲ್ ಮುಚ್ಚಲು ಕ್ರಮ ವಹಿಸಬೇಕು. ಕ್ಷೇತ್ರದ ಮತದಾರರಲ್ಲದವರನ್ನು ಕ್ಷೇತ್ರದಿಂದ ಹೊರ ನಡೆಸಬೇಕು ಎಂದು ನಿರ್ದೇಶನ ನೀಡಿದರು.ಟಿವಿ, ರೇಡಿಯೋ, ಸ್ಥಳೀಯ ಕೇಬಲ್ ನೆಟವರ್ಕ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನ ಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿತ ವಿಷಯಗಳು ಪ್ರಸಾರ ಮಾಡದಂತೆ ಕ್ರಮವಹಿಸಬೇಕು ಎಂದರು.ಮತದಾನ ದಿನದಂದು, ಮತಗಟ್ಟೆಗಳಿಗೆ ಚುನಾವಣಾಧಿಕಾರಿಗಳನ್ನು ಹೊರತುಪಡಿಸಿ, ಮತ್ಯಾರು ಮೊಬೈಲ್ ಬಳಸುವಂತಿಲ್ಲ. ಮತದಾರರೂ ಕೂಡ ಮತಗಟ್ಟೆ ಕೇಂದ್ರಗಳ ಒಳಗಡೆ ತರದಂತೆ ನೋಡಿಕೊಳ್ಳಬೇಕು ಎಂದರು.
    ಈ ವೇಳೆ ಅಪರ ಮುಖ್ಯ ಚುನಾವಣಾಧಿಕಾರಿ ಎಂ.ಕೂರ್ಮಾರಾವ, ವೆಂಕಟೇಶ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts